ಹಂಪಿ ಪುರಾತತ್ವ, ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಸೋಮವಾರ ಭೇಟಿ ಪರಿಶೀಲನೆ ನಡೆಸಿದರು. ಹಂಪಿ ವಿಭಾಗದ ನಿರ್ದೇಶಕ ಆರ್. ಸೈಜೇಶ್ವರ ಸ್ಥಳ ಪರಿವೀಕ್ಷಣೆ ವೇಳೆ ಮಾತನಾಡಿ, 1962ರ ನಿಯಮ ಪ್ರಕಾರ ₹10 ಮೌಲ್ಯಕ್ಕಿಂತ ಹೆಚ್ಚಿನ ಮೊತ್ತದ ವಸ್ತು ಸಿಕ್ಕರೆ ಸರ್ಕಾರಕ್ಕೆ ಸಲ್ಲುತ್ತದೆ. ಭೂಮಿಯ ಒಂದು ಅಡಿ ಆಳದಲ್ಲಿ ಏನೇ ಸಿಕ್ಕರೂ ಅದು ಸರ್ಕಾರದ್ದಾಗಿದೆ. ಇನ್ನೂ ಇದು ಯಾವ ಕಾಲಕ್ಕೆ ಸೇರಿದ್ದು, ಯಾರ ಆಳ್ವಿಕೆಯ ಎಂಬುದು ಬಗ್ಗೆ ಪರಿಶೀಲನೆ ನಡೆಯಬೇಕಿದೆ.
ವಶಕ್ಕೆ ಪಡೆದ ಆಭರಣಗಳ ಬಗ್ಗೆ ಜಿಲ್ಲಾಡಳಿತದೊಂದಿಗೆ ಮಾತುಕತೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇವೆ ಎಂದು ಹೇಳಿದ್ದನ್ನು ಬಿಟ್ಟಲ್ಲಿ ಆ ಕುಟುಂಬಕ್ಕೆ ಮಾತ್ರ ಭರವಸೆ ಮಾತ್ರ ಸೋಮವಾರವೂ ಯಾವ ಅಧಿಕಾರಿಗಳಿಂದಲೂ ಸಿಗಲಿಲ್ಲ.