ಕೃಷ್ಣಾ ನದಿಗೆ ಹರಿದು ಬರುತ್ತಿದೆ 60 ಸಾವಿರ ಕ್ಯೂಸೆಕ್ಸ್ ನೀರು; ಸೇತುವೆಗಳು ಜಾಲವೃತ

Published : Jul 05, 2026, 02:16 PM IST

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿನ ಭಾರಿ ಮಳೆಯಿಂದಾಗಿ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಈ ಹಿನ್ನೆಲೆಯಲ್ಲಿ, ಚಿಕ್ಕೋಡಿ, ನಿಪ್ಪಾಣಿ ತಾಲೂಕುಗಳ ಹಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಜಿಲ್ಲಾಡಳಿತವು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

PREV
15
ಕೃಷ್ಣಾ ನದಿಗೆ ನೀರು

ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಸುಮಾರು 60 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದರಲ್ಲಿ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದಲೇ ಸುಮಾರು 40 ಸಾವಿರ ಕ್ಯೂಸೆಕ್ಸ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ.

25
ದೂದಗಂಗಾ ಮತ್ತು ವೇದಗಂಗಾ

ದೂದಗಂಗಾ ಮತ್ತು ವೇದಗಂಗಾ ಈ ಎರಡೂ ನದಿಗಳು ಪ್ರಸ್ತುತ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ನದಿಗಳ ನೀರಿನ ಮಟ್ಟ ಹೆಚ್ಚಾಗಿರುವುದರಿಂದ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕುಗಳಲ್ಲಿ ಹಲವು ಪ್ರಮುಖ ಸಂಪರ್ಕ ಸೇತುವೆಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಬಳಸಲಾಗುತ್ತಿದೆ.

35
ಚಿಕ್ಕೋಡಿ-ನಿಪ್ಪಾಣಿ ತಾಲೂಕಿನಲ್ಲಿ ಸೇತುವೆಗಳು ಜಲಾವೃತ

ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿರುವ ಕಲ್ಲೋಳ-ಯಡ್ಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ನಿಪ್ಪಾಣಿ ತಾಲೂಕಿನ ಒಟ್ಟು ಮೂರು ಸಂಪರ್ಕ ಸೇತುವೆಗಳು ಸಂಪೂರ್ಣ ಜಲಾವೃತವಾಗಿವೆ.

45
ರಾಜಾಪುರ-ಜುಗಳ ಸೇತುವೆ ಮುಳುಗಡೆ

ದೂದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಾರದಗಾ-ಬೋಜ್ ಮತ್ತು ಭೋಜವಾಡಿ-ಕುಣ್ಣುರ ಸಂಪರ್ಕಿಸುವ ಸೇತುವೆಗಳು ಜಲಾವೃತಗೊಂಡಿವೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾರವಾಡ-ಕನ್ನೂರ ಸೇತುವೆಯೂ ಹಾನಿಗೊಳಗಾಗಿದೆ.ಮಹಾರಾಷ್ಟ್ರದಲ್ಲಿರುವ ರಾಜಾಪುರ-ಜುಗಳ ಸೇತುವೆಯೂ ಸಹ ನೀರಿನಲ್ಲಿ ಮುಳುಗಡೆಯಾಗಿದೆ.

55
ಜಿಲ್ಲಾ ಆಡಳಿತದ ಮುನ್ನೆಚ್ಚರಿಕೆ

ಪ್ರಮುಖ ಸೂಚನೆ: ಕೃಷ್ಣಾ, ವೇದಗಂಗಾ ಮತ್ತು ದೂದಗಂಗಾ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಸಾರ್ವಜನಿಕರು ಯಾರೂ ನದಿಗೆ ಇಳಿಯಬಾರದು ಮತ್ತು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಆಡಳಿತವು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

Read more Photos on
click me!

Recommended Stories