ಕಾಲೇಜಿಗೆ ರಜೆ ಹಾಕಿ ಮನೆಯಲ್ಲಿದ್ದಳು : ಅಮ್ಮ ಬರೋದ್ರೊಳಗೆ ಶವವಾಗಿದ್ದಳು
ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವ ಪತ್ತೆ
ಮಂಗಳೂರು ಹೊರವಲಯದ ಕುಂಪಲ ಆಶ್ರಯಕಾಲನಿಯಲ್ಲಿ ಘಟನೆ
ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಶವವಾಗಿ ಪತ್ತೆಯಾದಾಕೆ. ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಪ್ರೇಕ್ಷಾ
ಇವತ್ತು ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು
ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದು, ಪ್ರೇಕ್ಷಾ ಮನೆಯಲ್ಲಿ ಒಬ್ಬಳೇ ಇದ್ದಳು
ಮಧ್ಯಾಹ್ನ ತಾಯಿ ಊಟಕ್ಕೆಂದು ಮನೆಗೆ ಬಂದ ಸಂದರ್ಭ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ
Suvarna News