ಮಲ ತ್ಯಾಜ್ಯದಿಂದ ಗೊಬ್ಬರ: ಬೆಂಗ್ಳೂರಲ್ಲಿ ರಾಜ್ಯದ ಮೊದಲ ಘಟಕ

Kannadaprabha News   | Asianet News
Published : Apr 05, 2021, 08:04 AM IST

ಬೆಂಗಳೂರು(ಏ.05): ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಿ ಗೊಬ್ಬರವನ್ನಾಗಿಸುವ ಎಫ್‌ಎಸ್‌ಟಿಪಿ ಘಟಕ ನಿರ್ಮಾಣವನ್ನು ರಾಜ್ಯದಲ್ಲೇ ಮೊದಲ ಬಾರಿಗೆ ಮಾಡಲಾಗುತ್ತಿದೆ ಎಂದು ಶಾಸಕ ಎಸ್‌.ಅರ್‌. ವಿಶ್ವನಾಥ್‌ ಹೇಳಿದ್ದಾರೆ. 

PREV
14
ಮಲ ತ್ಯಾಜ್ಯದಿಂದ ಗೊಬ್ಬರ: ಬೆಂಗ್ಳೂರಲ್ಲಿ ರಾಜ್ಯದ ಮೊದಲ ಘಟಕ

ರಾಜಾನುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಫ್‌ ಎಸ್‌ಟಿಪಿ ಘಟಕ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ವಿಶ್ವನಾಥ್‌

24

ಗ್ರಾಮಾಂತರ ಪ್ರದೇಶದ ಶೌಚಾಲಯಗಳಲ್ಲಿ ಫಿಟ್‌ಗುಂಡಿಗಳನ್ನು ನಿರ್ಮಿಸಿ ತುಂಬಿದ ಬಳಿಕ ಕೆರೆ ಚರಂಡಿಗಳಿಗೆ ಬಿಡಲಾಗುತ್ತಿತ್ತು. ಆದರೆ ಇದೀಗ ಎಫ್‌ ಎಸ್‌ಟಿಪಿ ಘಟಕ ನಿರ್ಮಾಣ ಆಗುವುದರಿಂದ ಕೊಳಚೆ ನೀರನ್ನು ಶುದ್ಧೀಕರಿಸುವುದರ ಜೊತೆಗೆ ಮಲತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಗೊಬ್ಬರವನ್ನಾಗಿಸಿ ಕೃಷಿಗೆ ಬಳಸಬಹುದಾಗಿದೆ ಎಂದು ಹೇಳಿದ ಶಾಸಕ ವಿಶ್ವನಾಥ್‌

34

ಗ್ರಾಮ ಪಂಚಾಯಿತಿ ಪಿಡಿಒ ರಾಜೇಶ್‌ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ .44 ಲಕ್ಷ ವೆಚ್ಚದಲ್ಲಿ ಈ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಪ್ರದೇಶದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಎರಡು ಹಂತದಲ್ಲಿ ಶುದ್ದೀಕರಣ ಮಾಡಲಾಗುತ್ತದೆ. ಜೊತೆಗೆ ಶೌಚಾಲಯದ ತ್ಯಾಜ್ಯವನ್ನು ಗೊಬ್ಬರ ಮಾಡಬಹುದಾಗಿದೆ. ಈ ಘಟಕಕ್ಕೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಯವರು ಕೂಡಾ ಮಲತ್ಯಾಜ್ಯ ನೀಡಬಹುದಾಗಿದೆ. ಘಟಕ ನಿರ್ಮಾಣಕ್ಕೆ ಸರ್ಕಾರದಿಂದ ಒಂದೂವರೆ ಎಕರೆ ಜಾಗ ಮಂಜೂರು ಮಾಡಿದ್ದು, ಮುಂದಿನ ನಾಲ್ಕು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

44

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಎಂಜಿನಿಯರ್‌ ಪ್ರಭು, ಜಿಲ್ಲಾ ಪಂಚಾಯಿತಿ ಸದಸ್ಯ ವೆಂಕಟೇಶ್‌, ಬಿಜೆಪಿ ಮುಖಂಡರಾದ ಹನುಮಯ್ಯ, ಮೋಹನ್‌ ಮತ್ತಿತರರು ಹಾಜರಿದ್ದರು.

click me!

Recommended Stories