ಬುಧವಾರ ಅಂಜನಾದ್ರಿಗೆ ಭೇಟಿ ನೀಡಿದ ಅವರು ತಿರುಪತಿಯೇ ಆಂಜನೇಯನ ಜನ್ಮಸ್ಥಳ ಎನ್ನುವ ವಾದವನ್ನು ಟೀಕಿಸಿದರು. ‘ಇಲ್ಲೊಂದು ತಿರುಪತಿ ದೇವಸ್ಥಾನ ಕಟ್ಟಿ ಇದೇ ತಿರುಪತಿ ಅಂದ್ರೆ ಒಪ್ಪೋಕೆ ಆಗುತ್ತದೆಯೇ’ ಎಂದು ಯೋಗೇಶ್ವರ್ ಪ್ರಶ್ನಿಸಿದರು.
ಅಂಜನಾದ್ರಿಗೆ ಇಂದು ಪ್ರವಾಸಿಗರ ದಂಡೇ ಬರುತ್ತಿದೆ. ಇದನ್ನು ವಿಶ್ವಮಟ್ಟದ ಪ್ರವಾಸೋದ್ಯಮದಲ್ಲಿ ಗುರುತಿಸಿಕೊಳ್ಳುವಂತೆ ಮಾಡಲು ವಿಶೇಷ ಯೋಜನೆ ರೂಪಿಸುತ್ತೇವೆ. ಕ್ಷೇತ್ರದ ಅಭಿವೃದ್ಧಿಗೆ ಸಾವಿರಾರು ಕೋಟಿಯ ಮಾಸ್ಟರ್ ಪ್ಲಾನ್ ಬೇಕಾಗುತ್ತದೆ. ಇದರ ಬಗ್ಗೆ ಅಧಿಕಾರಿಗಳು ಮತ್ತು ಈ ಭಾಗದ ಜನಪ್ರತಿನಿಧಿಗಳೊಂದಿಗೆ ಸೇರಿ ಚರ್ಚೆ ಮಾಡುತ್ತೇವೆ. ಪ್ರವಾಸೋದ್ಯಮ ಇಲಾಖೆ ಮಾತ್ರವಲ್ಲದೆ ಇತರೆ ಎಲ್ಲ ಇಲಾಖೆಗಳು ಸೇರಿ ಈ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿ ಮಾಡಬೇಕಾಗಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟ
ಅಂಜನಾದ್ರಿ ಸೇರಿ ಸುತ್ತಮುತ್ತಲ ವಿವಿಧ ಐತಿಹಾಸಿಕ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕಿಷ್ಕಿಂದೆ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಯೋಗೇಶ್ವರ ಹೇಳಿದರು.