ಹುಬ್ಬಳ್ಳಿ: ಗೋಕುಲ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಶೆಟ್ಟರ್‌

First Published Aug 3, 2020, 10:02 AM IST

ಹುಬ್ಬಳ್ಳಿ(ಆ.03): ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್‌ ಶೆಟ್ಟರ್‌ ಗೋಕುಲ ಕೈಗಾರಿಕಾ ವಸಹಾತುವಿನಲ್ಲಿ 41 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಡ್ರೇನ್‌, ಸಿಸಿ ರಸ್ತೆ, ಪೈಪ್‌ಲೈನ್‌ ಸೇರಿ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. 

ಕೈಗಾರಿಕಾ ವಸಹಾತುವಿನಲ್ಲಿ ರಸ್ತೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 2.37 ಕಿಮೀಗೆ 20 ಕೋಟಿ ಹಾಗೂ ಎರಡನೇ ಹಂತದಲ್ಲಿ 2.07 ಕಿಮೀಗೆ 21 ಕೋಟಿ ಬಿಡುಗಡೆ: ಶೆಟ್ಟರ್‌
undefined
ಮೊದಲ ಹಂತದ ಕಾಮಗಾರಿಯಲ್ಲಿ 900 ಮೀ, ಎರಡನೇ ಹಂತದ ಕಾಮಗಾರಿಯಲ್ಲಿ 950ಮೀ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಉಳಿದ ನಿರ್ಮಾಣ ಕಾರ್ಯವನ್ನು 2 ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಹೆಸ್ಕಾಂನೊಂದಿಗೆ ಸಂಪರ್ಕಿಸಿ ನೆಲಮಟ್ಟದಲ್ಲಿ ವಿದ್ಯುತ್‌ ಸಂಪರ್ಕಿಸುವ ಕಾರ್ಯ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
undefined
ಹನುಮಂತನ ನಗರದಲ್ಲಿ ರಾಜಕಾಲುವೆಗೆ ನಿರ್ಮಿಸಲಾಗುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಿದ ಸಚಿವ ಜಗದೀಶ್‌ ಶೆಟ್ಟರ್‌
undefined
ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ ಮುಖಂಡರಾದ ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ್‌, ಹು-ಧಾ ಸ್ಮಾರ್ಟ್‌ಸಿಟಿ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಇದ್ದರು.
undefined
click me!