ಸಚಿವ ಮಧು ಬಂಗಾರಪ್ಪ ಅವರು ತಮ್ಮ ಸ್ವಕ್ಷೇತ್ರವಾದ ಸೊರಬದ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಸದಾ ಒತ್ತು ನೀಡುತ್ತಾ ಬಂದಿದ್ದಾರೆ. ಅದರ ಮುಂದುವರಿದ ಭಾಗವಾಗಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 97ಕ್ಕಿಂತ ಹೆಚ್ಚು ಅಂಕ ಗಳಿಸಿದ ಸೊರಬ ತಾಲೂಕಿನ 32 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಮಾನ ಪ್ರಯಾಣದ ಭಾಗ್ಯ ಕಲ್ಪಿಸಿದ್ದಾರೆ. ಈ ವಿದ್ಯಾರ್ಥಿಗಳು ಕೇವಲ ಪುಸ್ತಕದ ಬದನೆಕಾಯಿಗಳಾಗದೆ, ವಿಮಾನ ಏರುವ ಮೂಲಕ ಜಗತ್ತನ್ನು ನೋಡುವ ಅವಕಾಶ ಪಡೆದರು. ವಿಶೇಷವೆಂದರೆ, ಪ್ರತಿಯೊಬ್ಬ ವಿದ್ಯಾರ್ಥಿಯ ಜೊತೆಗೆ ಅವರ ಪೋಷಕರಿಗೂ ಸಹ ವಿಮಾನ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು.