ತಳಕೇಬೈಲ್ ಹಾಗೂ ಕಳಚೆಯಲ್ಲಿ ಪರ್ಯಾಯ ರಸ್ತೆ ನಿರ್ಮಾಣ ಕುರಿತು ಮಾರ್ಗೋಪಾಯ ಸೂಚಿಸಿ, ಯೋಜನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ ಸಚಿವರು
ಕಳಚೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡವರಿಗೆ ಸಾಂತ್ವನ ಹೇಳಿ ಮನೆ ಕುಸಿದು ಸಾವನ್ನಪ್ಪಿದ ದೇವಕಿ ಗಾಂವ್ಕರ್ ಕುಟುಂಬದವರಿಗೆ 5 ಲಕ್ಷ ಪರಿಹಾರಧನದ ಚೆಕ್ ವಿತರಿಸಿದ ಸಚಿವ ಶಿವರಾಮ ಹೆಬ್ಬಾರ
ಅರಬೈಲ್ ಘಟ್ಟಕ್ಕೆ ತೆರಳಿದ ಸಚಿವರು ಘಟ್ಟದಲ್ಲಿ ಬಿದ್ದ ಮರಗಳನ್ನು ತೆರವುಗೊಳಿಸುವಂತೆ ಸೂಚಿಸಿದ ಸಚಿವರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮೂರು ದಿನಗಳಲ್ಲಿ ಹೆದ್ದಾರಿ ದುರಸ್ತಿಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ತಾಕೀತು ಮಾಡಿದರು.
ಗುಳ್ಳಾಪುರದಲ್ಲಿ ನೆರೆಯಿಂದ ಸಂತ್ರಸ್ತರಾದ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ನೊಂದವರಿಗೆ ಸಾಂತ್ವಾನ ಹೇಳಿದರು. ಸಚಿವರೊಂದಿಗೆ ಉಪ ಆಯುಕ್ತೆ ಆಕೃತಿ ಬನ್ಸಾಲ್, ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ವಿವಿಧ ಇಲಾಖಾಧಿಕಾರಿಗಳು ಇದ್ದರು.