Mysuru lecturer harassment case: ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳಿಗೆ ಹೆಚ್ಚು ಅಂಕ ಹಾಗೂ ಒಳ್ಳೆಯ ಕೆಲಸದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಪನ್ಯಾಸಕ ಭರತ್ ಭಾರ್ಗವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ನೀಡುವೆ, ಒಳ್ಳೆಯ ಕೆಲಸ ಕೊಡಿಸುವೆ ಎಂದು ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ಕಾಮುಕ ಉಪನ್ಯಾಸಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಿರುದ್ಧ ದೂರು ದಾಖಲಾಗಿದೆ.
24
ಉಪನ್ಯಾಸಕ ಭರತ್ ಭಾರ್ಗವ್
ಉಪನ್ಯಾಸಕ ಭರತ್ ಭಾರ್ಗವ್ ಮೈಸೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಕೆಲಸ ಮಾಡಿಕೊಂಡಿದ್ದು, ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ. BNS ಸೆಕ್ಷನ್ 126 (2) 75 (2) 351 (2) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
34
ಮಜಾ ಮಾಡೋಣ ಬಾ
ಮಾರ್ಕ್ಸ್ ಹೆಚ್ಚು ನೀಡುತ್ತೇನೆ ಒಳ್ಳೆಯ ಕೆಲಸ ಕೊಡಿಸುತ್ತೇನೆ ಎಂದು ಆಮಿಷ ನೀಡುತ್ತಿದ್ದನು. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಅಂತಾ ಉಪನ್ಯಾಸಕ ಭರತ್ ಭಾರ್ಗವ್ ಕರೆಯುತ್ತಿದ್ದನಂತೆ. ಇಷ್ಟು ಮಾತ್ರವಲ್ಲದೇ ವಿದ್ಯಾರ್ಥಿನಿ ಖಾಸಗಿ ಅಂಗಾಂಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಎಂಬ ಆರೋಪ ಕೇಳಿ ಬಂದಿದೆ.
ಭರತ್ ಭಾರ್ಗವ್ ನೀಡುತ್ತಿದ್ದ ಕಿರುಕುಳದ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ವಿದ್ಯಾರ್ಥಿನಿ ದೂರು ನೀಡಿದ್ದರು. ದೂರು ನೀಡಿದ್ದಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದನು. ತಾನು ಹೇಳಿದಂತೆ ಕೇಳದಿದ್ದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇದೀಗ ದೂರು ದಾಖಲಿಸಿರುವ ವಿದ್ಯಾರ್ಥಿನಿ ಉಪನ್ಯಾಸಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.