ನನ್ನ ತಾಯಿ ಸಂಧ್ಯಾಳ ಸಾವು ಕೇವಲ ಆತ್ಮ*ಹತ್ಯೆಯಲ್ಲ, ಇದೊಂದು ಕೊಲೆ ಎಂದು ಮೃತ ಸಂಧ್ಯಾ ಅವರ ಪುತ್ರಿ ಸೃಷ್ಟಿ ಗಂಭೀರ ಆರೋಪ ಮಾಡಿದ್ದಾರೆ. 'ನನ್ನ ತಂದೆ ಮತ್ತು ಸಹೋದರ ಸೇರಿಕೊಂಡು ತಾಯಿಗೆ ಕಿರುಕುಳ ನೀಡುತ್ತಿದ್ದರು. ತಂದೆ ಯಾವಾಗಲೂ ತಾಯಿಯನ್ನು ಅನುಮಾನದಿಂದ ನೋಡುತ್ತಿದ್ದರು ಹಾಗೂ ಹಣದ ವಿಷಯಕ್ಕೆ ಗಲಾಟೆ ಮಾಡುತ್ತಿದ್ದರು.
ನನ್ನ ತಾಯಿಯ ಸಾವಿಗೆ ಇವರಿಬ್ಬರೇ ಕಾರಣ, ಅವರಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ತಾಯಿಯ ಅಂತ್ಯಸಂಸ್ಕಾರವನ್ನು ಇವರು ಮಾಡಬಾರದು, ಬದಲಿಗೆ ನನ್ನ ಮಾವ ಮಾಡಬೇಕು' ಎಂದು ಸೃಷ್ಟಿ ಆಕ್ರೋಶ ಹೊರಹಾಕಿದ್ದಾರೆ.