ಕಬ್ಬನ್ ಪಾರ್ಕ್‌ನಿಂದ ಆರಂಭವಾದ ರ್ಯಾಲಿಯು ಕ್ವೀನ್ಸ್ ಸರ್ಕಲ್ ಮುಖಾಂತರ ಎಂ.ಜಿ. ರಸ್ತೆಯಲ್ಲಿ ಸಾಗಿ ಕಾವೇರಿ ಆರ್ಟ್ಸ್ ಆ್ಯಂಡ್ ಕ್ರಾಫ್ಟ್, ಓಪೆರಾ ಜಂಕ್ಷನ್, ರೆಸಿಡೆನ್ಸಿ ರಸ್ತೆ, ಸುಲೇವಾನ್ ಹಾಕಿ ಕ್ರೀಡಾಂಗಣದಲ್ಲಿ ಅಂತ್ಯವಾಯಿತು. ಈ ರ್ಯಾಲಿಯಲ್ಲಿ ವಿದ್ಯಾರ್ಥಿಗಳ ಜತೆಗೆ ಆಟೋರಿಕ್ಷಾ, ಕ್ಯಾಬ್, ಲಾರಿ, ಬಸ್ಸುಗಳ ಚಾಲಕರು ಹಾಗೂ ವಾಹನ ತರಬೇತಿ ಶಾಲೆಯ ಮುಖ್ಯಸ್ಥರು ಭಾಗವಹಿಸಿದ್ದರು.