ಶಿವಮೊಗ್ಗದ ವಿಶಾಲ್ ಮಾರ್ಟ್ ಲಿಫ್ಟ್ ಘಟನೆಯ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯ ಹಾಗೂ ಮಹಿಳೆಯರ ವಿರುದ್ಧ ಕೆಪಿಟಿಸಿಎಲ್ ನೌಕರ ಅವಮಾನಕಾರಿ ಕಾಮೆಂಟ್, ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾನೂನು ಕ್ರಮಕ್ಕೆ ಒತ್ತಾಯಿಸಲಾಗಿದೆ.
ಶಿವಮೊಗ್ಗ ನಗರದ ಆಲ್ಕೊಳ ಸರ್ಕಲ್ ಸಮೀಪದ ವಿಶಾಲ್ ಮಾರ್ಟ್ ಕಟ್ಟಡದ ಲಿಫ್ಟ್‌ನಲ್ಲಿ 9 ಜನರು ಸಿಲುಕಿಕೊಂಡಿದ್ದ ಘಟನೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಎಲ್ಲರನ್ನು ಸುರಕ್ಷಿತವಾಗಿ ಹೊರತೆಗೆದಿದ್ದರು.
27
ಮುಸ್ಲಿಂ ಸಮುದಾಯದ ಬಗ್ಗೆ ಅವಮಾನಕಾರಿ ಕಾಮೆಂಟ್
ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಸಮುದಾಯ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹಾಗೂ ಧಾರ್ಮಿಕ ದ್ವೇಷ ಪ್ರಚೋದಿಸುವ ರೀತಿಯ ಕಾಮೆಂಟ್ ಪೋಸ್ಟ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
37
‘100 ಕೆಜಿ’ ಹೇಳಿಕೆ ವಿವಾದಕ್ಕೆ ಬೆಂಕಿ!’
'E saabri ge E Muslim ge common sence ella… Obbru obbru 100 kg edare thuu Over load' ಎಂಬ ರೀತಿಯ ಕಾಮೆಂಟ್ ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಕಾಮೆಂಟ್‌ನಲ್ಲಿ ಧಾರ್ಮಿಕ ಆಧಾರದ ಮೇಲೆ ದ್ವೇಷ ಹಾಗೂ ಅವಮಾನಕಾರಿ ಭಾಷೆ ಬಳಸಲಾಗಿದೆ. ಜೊತೆಗೆ, ಮಹಿಳೆಯರ ದೇಹದಾಕಾರವನ್ನು ಹೀನಾಯವಾಗಿ ಟೀಕಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಆರೋಪಿಸಲಾಗಿದೆ.
57
ಕೆಪಿಟಿಸಿಎಲ್ ನೌಕರ ವಿರುದ್ಧ ಕ್ರಮಕ್ಕೆ ಒತ್ತಾಯ!
ಈ ಪೋಸ್ಟ್ ಮಾಡಿದವರು ಕೆಪಿಟಿಸಿಎಲ್‌ನ ಸರ್ಕಾರಿ ನೌಕರ ಸರ್ವಮಂಗಳ ಎಂದು ಹೇಳಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಸರ್ಕಾರಿ ನೌಕರರಾಗಿಯೇ ಸಮಾಜದಲ್ಲಿ ದ್ವೇಷ ಹರಡುವ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
67
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದಿಂದ ಪೊಲೀಸ್ ದೂರು!’
ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಸೈಯದ್ ವಾಹಿದ್ ಅಡ್ಡು ಅವರು ಶಿವಮೊಗ್ಗ ಸೈಬರ್ ಕ್ರೈಂ ಠಾಣೆ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ಪ್ರಕರಣದ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ
77
ಸೈಬರ್ ಕ್ರೈಂ ಠಾಣೆಗೆ ತನಿಖೆ ಸವಾಲು!
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ಕಾಮೆಂಟ್ ಇದೀಗ ಶಿವಮೊಗ್ಗದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಪ್ರಕರಣದ ಕುರಿತು ಸೈಬರ್ ಕ್ರೈಂ ಪೊಲೀಸರು ತನಿಖೆ ಆರಂಭಿಸುವ ಸಾಧ್ಯತೆ ಇದೆ.