ಶುಚಿ, ರುಚಿ ಆಹಾರ, ಸ್ವಚ್ಛತೆ: ಬದಲಾದ ರಾಜೀವ್ ಗಾಂಧಿ ಆಸ್ಪತ್ರೆ ಚಿತ್ರಣ ಹೀಗಿದೆ

First Published Jun 24, 2020, 2:51 PM IST

ಸುವರ್ಣ ನ್ಯೂಸ್ ಬರದಿ ಬೆನ್ನಲ್ಲೇ ಬೆಂಗಳೂರು ರಾಜೀವ್ ಗಾಂಧಿ ಆಸ್ಪತ್ರೆ ಚಿತ್ರಣವೇ ಬದಲಾಗಿದೆ. ಶುಚಿ ರುಚಿ ಆಹಾರದ ಜೊತೆಗೆ ಆಸ್ಪತ್ರೆಯ ಸ್ವಚ್ಛತೆಯನ್ನೂ ಕಾಪಾಡಲಾಗುತ್ತಿದೆ. ಇಲ್ಲಿದೆ ಫೋಟೋಸ್

ಕೊರೋನಾ ಸೋಂಕಿಗೆ ತುತ್ತಾಗುವವವರನ್ನು ನಗರದ ರಾಜೀವ್‌ಗಾಂಧಿ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ದಿನ ಕಳೆದಂತೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ರೋಗಿಗಳಿಗೆ ಸೂಕ್ತ ಆರೈಕೆ ಲಭ್ಯವಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
undefined
ಇದರಿಂದ ಬೇಸತ್ತಿರುವ ರೋಗಿಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದು, ತಕ್ಷಣ ಆಸ್ಪತ್ರೆಯಿಂದ ಬಿಡುಗಡೆ ಮಾಡಿ. ಇಲ್ಲವೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಎಂದು ಆಗ್ರಹಿಸಿದ್ದರು.
undefined
ಸೂಕ್ತ ಸಮಯಕ್ಕೆ ಊಟ ಲಭ್ಯವಾಗಿಲ್ಲ. ಪರಿಣಾಮ ರೋಗಿಗಳು ಬಳಲುತ್ತಿದ್ದಾರೆ. ಶೌಚಾಲಯದಲ್ಲಿ ನೀರನ್ನು ಬಳಸಲು ಚೆಂಬು ಒದಗಿಸಿಲ್ಲ. ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿದ್ದು, ಯಾವುದೇ ವೈದ್ಯರು ಬಂದು ಪರಿಶೀಲಿಸಿಲ್ಲ ಎಂದು ಆರೋಪಿಸಿದ್ದರು
undefined
ನಾವು ಸಾಯುವ ಹಂತಕ್ಕೆ ತಲುಪಿದ್ದೇವೆ. ಸರ್ಕಾರ ನಮ್ಮ ರಕ್ಷಣೆಗೆ ಮುಂದಾಗಬೇಕು ಎಂದು ರಾಜೀವ್‌ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್‌ ಸಿಬ್ಬಂದಿ ಪರಿ ಪರಿಯಾಗಿ ಬೇಡಿಕೊಂಡಿರುವ ವಿಡಿಯೋ ವೈರಲ್‌ ಆಗಿತ್ತು
undefined
ವಾರ್ಡ್‌ಗಳನ್ನು ಸ್ವಚ್ಛಗೊಳಿಸುತ್ತಿಲ್ಲ. ಸ್ಯಾನಿಟೈಜರ್‌ ವ್ಯವಸ್ಥೆ ಮಾಡಿಲ್ಲ ಮಾಸ್ಕ್‌ ವಿತರಣೆ ಮಾಡದ ಪರಿಣಾಮ ಕಳೆದ ಎರಡು ದಿನಗಳಿಂದ ಒಂದೇ ಮಾಸ್ಕ್‌ ಬಳಕೆ ಮಾಡುತ್ತಿದ್ದೇವೆ. ಕುಡಿಯಲು ಶುದ್ಧ ನೀರು ಲಭ್ಯವಿಲ್ಲ ಎಂದು ಆರೋಪಿಸಿದ್ದರು.
undefined
ಬೆಳಗಿನ ಆಹಾರಕ್ಕೆ ಸೆಟ್ ದೋಸೆ, ಚಟ್ನಿ, ಸಾಗು
undefined
ಶೌಚಾಲಯಗಳನ್ನು ಶುಚಿಯಾಗಿಡಲಾಗುತ್ತಿದೆ.
undefined
ಕರ್ತವ್ಯ ಮಾಡುವಾಗ ತೊಂದರೆಗೆ ಸಿಲುಕಿದ್ದೇವೆ. ಈಗ ಊಟ ಇಲ್ಲದೆ ಪರದಾಡುತ್ತಿದ್ದೇವೆ. ಇದೇ ರೀತಿ ಮುಂದುವರೆದಲ್ಲಿ ಎಲ್ಲರೂ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗುತ್ತೇವೆ. ಆರೋಗ್ಯ ಸಚಿವರು ತಕ್ಷಣ ಬಂದು ನಮ್ಮನ್ನು ಕಾಪಾಡಬೇಕು ಎಂದು ಕೈ ಮುಗಿದು ಬೇಡಿಕೊಂಡಿದ್ದರು.
undefined
ಎಲ್ಲಡೆ ಕಸದ ಬುಟ್ಟಿಗಳನ್ನೂ ಇರಿಸಲಾಗಿದೆ.
undefined
Rajeev gandhi
undefined
ಕೊರೋನಾ ಪಾಸಿಟೀವ್‌ ಎಂದು ಕರೆತಂದು ಕಳೆದ 19 ದಿನಗಳಿಂದ ಕೂಡಿ ಹಾಕಲಾಗಿದೆ. ಈವರೆಗೂ ಪರೀಕ್ಷೆ ನಡೆಸಿಲ್ಲ. ಸಮಯಕ್ಕೆ ಕುಡಿಯಲು ನೀರು, ಊಟ ಲಭ್ಯವಾಗುತ್ತಿಲ್ಲ. ಯಾವ ಕಾರಣಕ್ಕಾಗಿ ಈ ಶಿಕ್ಷೆ ನೀಡುತ್ತಿದ್ದೀರಿ. ಇದರ ಬದಲಿಗೆ ವಿಷದ ಇಂಜೆಕ್ಷನ್‌ ನೀಡಿ. ಒಂದೇ ಕ್ಷಣದಲ್ಲಿ ಜೀವ ಬಿಡುತ್ತೇವೆ ಎಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತರು ಹೇಳುವ ವಿಡಿಯೋ ವೈರಲ್‌ ಆಗಿದೆ.
undefined
ಬೆಳಗ್ಗೆ ತಿಂಡಿ ಕೊಟ್ಟಿದ್ದಾರೆ. ಸಂಜೆ ನಾಲ್ಕು ಗಂಟೆಯಾದರೂ ಊಟ ನೀಡುತ್ತಿಲ್ಲ. ನೀಡುವ ಅನ್ನ ಬೆಂದಿಲ್ಲ. ಮಧುಮೇಹ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವಯಸ್ಸಾದ ರೋಗಿಗಳನ್ನು ಇಲ್ಲಿ ಕೂಡಿ ಹಾಕಲಾಗಿದೆ. ಈ ರೋಗಿಗಳನ್ನು ಯಾರೂ ಕೇಳುವವರೇ ಇಲ್ಲ ಎಂದು ರೋಗಿಗಳ ತಮ್ಮ ನೋವನ್ನು ತೋಡಿಕೊಂಡಿದ್ದರು.
undefined
ಕಡಿಯುವುದಕ್ಕೆ ಶುದ್ಧ ನೀರಿನ ವ್ಯವಸ್ಥೆ ಮಾಡಿರುವುದು
undefined
ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿರುವ ತುರ್ತು ಚಿಕಿತ್ಸಾ ಘಟಕ 250 ಬೆಡ್‌ ಮತ್ತು ‘ಎಚ್‌’ ಬ್ಲಾಕ್‌ನಲ್ಲಿರುವ ಬೆಡ್‌ಗಳನ್ನು ರೋಗಿಗಳಿಗೆ ಒದಗಿಸಲಾಗಿದೆ. ಆದರೆ, ಇನ್ನುಳಿದ ‘ಸಿ’ ಬ್ಲಾಕ್‌ ಮತ್ತು ಮಿಂಟೋ ಆಸ್ಪತ್ರೆಯಲ್ಲಿ ಎಲ್ಲ ಬೆಡ್‌ಗಳು ಖಾಲಿ ಇವೆ. ಆದರೂ ರೋಗಿಗಳಿಗೆ ನೀಡುತ್ತಿಲ್ಲ. ಬೆಡ್‌ ಇಲ್ಲ ಎಂದು ಆಸ್ಪತ್ರೆಯಲ್ಲಿರುವ ನೋಡಲ್‌ ಅಧಿಕಾರಿಗಳು ತಿಳಿಸುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದರು.
undefined
ನೀರನ್ನು ಬಿಸಿ ಮಾಡಿ ಕುಡಿಯುವವರಿಗೆ ಆ ವ್ಯವಸ್ಥೆಯನ್ನೂ ಮಾಡಲಾಗಿದೆ
undefined
ಪ್ರತಿ ರೋಗಿಯ ಕೋಣೆಯನ್ನೂ ಸುಸಜ್ಜಿತವಾಗಿರುವಂತೆ ನೋಡಿಕೊಳ್ಳಲಾಗಿದೆ
undefined
ಸ್ಯಾನಿಟೈಸರ್‌ಗಳನ್ನೂ ಇರಿಸಲಾಗಿದ್ದು, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ
undefined
click me!