Published : Mar 22, 2020, 10:23 AM ISTUpdated : Mar 22, 2020, 10:26 AM IST
ಬೆಂಗಳೂರು[ಮಾ. 22]: ಕೊರೋನಾ ವೈರಸ್ ನಿಂದ ನಮ್ಮನ್ನ ನಾವು ರಕ್ಷಿಸಿಕೊಳ್ಳಲು ಭಾನುವಾರ ಒಂದು ದಿನ ಜನತಾ ಕರ್ಫ್ಯೂಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಕ್ಕೆ ಅಭೂತಪೂರ್ವ ಬೆಂಬಲ ವ್ಯೆಕ್ತವಾಗಿದೆ. ರಾಜ್ಯಾದ್ಯಂತ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ಜನರು ಮನೆಯಿಂದ ಹೊರ ಬಾರದ ಹಿನ್ನೆಲೆಯಲ್ಲಿ ಜನಸಂಚಾರ ಇಲ್ಲದೆ ರಸ್ತೆಗಳು ಬಿಕೋ ಎನ್ನುತ್ತಿವೆ.