ಬಳ್ಳಾರಿ(ಏ.30): ಕೊರೋನಾ ವೈರಸ್‌ನಿಂದ ರಕ್ಷಿಸಿಕೊಳ್ಳಲು ಮನೆಯಲ್ಲಿಯೇ ಇರಲು ಪ್ರಧಾನಿ ನರೇಂದ್ರ ಮೋದಿ ಲಾಕ್‌ಡೌನ್ ಆದೇಶಿಸಿದ್ದಾರೆ. ಆದರೆ, ಕೆಲವರು ಮಾತ್ರ ಸರ್ಕಾರದ ಆದೇಶವನ್ನ ಉಲ್ಲಂಘಿಸಿ ಅನಗತ್ಯವಾಗಿ ಹೊರಗಡೆ ತಿರುಗಾಡುತ್ತಿದ್ದಾರೆ. ಹೀಗಾಗಿ ಕೊರೋನಾ ಜಾಗೃತಿಗಾಗಿ ಜಿಲ್ಲೆಯ ಕಂಪ್ಲಿ ಪಟ್ಟಣದಲ್ಲಿ ವಿಶೇಷ ಅಭಿಯಾನ ನಡೆದಿದೆ.