Published : Mar 20, 2020, 10:22 AM ISTUpdated : Mar 20, 2020, 10:26 AM IST
ಕಲಬುರಗಿ(ಮಾ.20): ಮಹಾಮಾರಿ ಕೊರೋನಾ ವೈರಸ್ ಭೀತಿಯಿಂದ ಜಿಲ್ಲೆಯ ಅಫಜಲಪೂರ ತಾಲೂಕಿನಲ್ಲಿರುವ ಪ್ರಸಿದ್ಧ ಗಾಣಗಾಪೂರ ದತ್ತಾತ್ರೆಯ ದೇವಸ್ಥಾನ ಸಂಪೂರ್ಣ ಬಂದ್ ಆಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ದೇವಸ್ಥಾನದ ಆಡಳಿತ ಮಂಡಳಿ ತಕ್ಷಣಕ್ಕೆ ಜಾರಿಗೆ ಬರುವಂತೆ ದೇವಸ್ಥಾನಕ್ಕೆ ಭಕ್ತರು ಬರುವುದನ್ನ ನಿರ್ಬಂಧಿಸಿದೆ ಎಂದು ಹೇಳಿದೆ.