ಕಲಬುರಗಿ(ಮೇ.01): ಕಬ್ಬಿನ ಗದ್ದೆಗಳಲ್ಲಿ ಚಿರತೆ ಪ್ರತ್ಯಕ್ಷವಾಗಿ ಜನರಲ್ಲಿ ಭೀತಿ ಮೂಡಿಸಿದ ಘಟನೆ ಕಲಬುರಗಿ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ. ಕಬ್ಬಿನ ಗದ್ದೆಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಹೊಲದಲ್ಲಿ ಕೆಲಸ ಮಾಡುವವರು ಬೆಚ್ಚಿಬಿದ್ದಿದ್ದಾರೆ. ಚಿರತೆ ಸೆರೆ ಹಿಡಿಯಲು ನಾಯಿ ಇರುವ ಬೋನ್ ಬಳಸಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ.