ಸ್ವಾತಂತ್ರ್ಯ ದಿನವೇ ರಾಯಚೂರಲ್ಲಿ ಪ್ರತಿಭಟನೆ ಬಿಸಿ! ಕ್ರೀಡಾಂಗಣಕ್ಕೆ ನುಗ್ಗಲು ಯತ್ನಿಸಿದ ಹೋರಾಟಗಾರರು ವಶಕ್ಕೆ, ಬೇಡಿಕೆಗಳೇನು?

Published : Aug 15, 2026, 10:36 AM IST

ರಾಯಚೂರು ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ಆಗಮಿಸಿದ್ದ ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲು ಯತ್ನಿಸಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ದಲಿತ ಪ್ರಗತಿಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಷ್ಟಕ್ಕೂ ಸಂಘಟನೆಗಳ ಬೇಡಿಕೆಗಳೇನು? ಇಲ್ಲಿ ಕ್ಲಿಕ್ ಮಾಡಿ.

PREV
14
ಸಚಿವ ಸ್ಥಾನಕ್ಕೆ ಬೇಡಿಕೆ: ಉಸ್ತುವಾರಿ ಸಚಿವರಿಗೆ ಘೇರಾವ್ ಹಾಕಲು ಯತ್ನ

ರಾಯಚೂರು ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ರಾಯಚೂರಿನವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣಕ್ಕೆ ಆಗಮಿಸಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಅಜಯ್ ಸಿಂಗ್ ಅವರಿಗೆ ಘೇರಾವ್ ಹಾಕಲು ಮುಂದಾದ ಘಟನೆ ನಡೆದಿದೆ.

24
ರಾಜ್ಯ ಸರ್ಕಾರದ ವಿರುದ್ಧ ಅಕ್ರೋಶ

ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಹೋರಾಟಗಾರರು, ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ನೀಡದ, ಜಿಲ್ಲೆಯವರನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಿಸದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

34
ಸ್ಟೇಡಿಯಂಗೆ ನುಗ್ಗಲು ಯತ್ನ

ಧ್ವಜಾರೋಹಣ ನಡೆಯಲಿದ್ದ ಮಹಾತ್ಮಾ ಗಾಂಧಿ ಕ್ರೀಡಾಂಗಣದತ್ತ ತೆರಳಲು ಹೋರಾಟಗಾರರು ಯತ್ನಿಸಿದರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆದರು. ಆದರೂ ನುಗ್ಗಲು ಯತ್ನಿಸಿದಾಗ ಹಲವರು ವಶಕ್ಕೆ ಪಡೆದರು.

44
ರಾಯಚೂರಿಗೇ ಉಸ್ತುವಾರಿ ಸಚಿವ ಸ್ಥಾನ:

ಸಚಿವರ ಆಗಮನಕ್ಕೂ ಮುನ್ನವೇ ಪೊಲೀಸರು ಮುಂಜಾಗ್ರತ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ರಾಯಚೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

ರಾಯಚೂರು ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಮತ್ತು ಜಿಲ್ಲೆಯವರನ್ನೇ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ. ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Read more Photos on
click me!

Recommended Stories