ರಾಮನಗರ ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ: ಓಪನ್ ಹಾರ್ಟ್ ಸರ್ಜರಿಗೆ ಸಿದ್ಧತೆ

Published : Jun 15, 2026, 10:45 AM IST

ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಸ್ಟಂಟ್ ಅಳವಡಿಸಲಾಗಿದ್ದು, ಶೀಘ್ರದಲ್ಲೇ ಓಪನ್ ಹಾರ್ಟ್ ಸರ್ಜರಿ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

PREV
13
ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ

ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಶಾಸಕರ ಆರೋಗ್ಯ ವಿಚಾರಿಸಲು ಸಿಎಂ ಡಿಕೆ ಶಿವಕುಮಾರ್ ಹೊರಟಿದ್ದಾರೆ.

23
ಆರೋಗ್ಯ ಸ್ಥಿರ

ರಾತ್ರಿ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಶಾಸಕರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ವೈದ್ಯ ವಿ.ಕೆ.ಶ್ರೀನಿವಾಸ್ ಅವರು ಶಾಸಕರಿಗೆ ಚಿಕಿತ್ಸೆ ನೀಡುತ್ತಿದ್ದು, ಇಕ್ಬಾಲ್ ಹುಸೇನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

33
ಓಪನ್ ಹಾರ್ಟ್ ಸರ್ಜರಿ

ಎರಡು ದಿನದ ಹಿಂದೆ ಇಕ್ಬಾಲ್‌ ಹುಸೇನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ನಿನ್ನೆ ಇಕ್ಬಾಲ್ ಹುಸೇನ್ ಗೆ ಸ್ಟಂಟ್ ಹಾಕಲಾಗಿದೆ. ಎಲ್ಲ ಪರೀಕ್ಷೆಗಳನ್ನ ಮಾಡಿದ್ದಾಗ ಓಪನ್ ಹಾರ್ಟ್ ಸರ್ಜರಿ ಮಾಡಬೇಕಿದೆ. ನಾಳೆ ಅಥವಾ ನಾಡಿದ್ದು ಓಪನ್ ಹಾರ್ಟ್ ಸರ್ಜರಿ ಮಾಡುತ್ತೇವೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಡಾಕ್ಟರ್ ವಿ.ಕೆ.ಶ್ರೀನಿವಾಸ್ ಹೇಳಿದ್ದಾರೆ.

Read more Photos on
click me!

Recommended Stories