ಹಿರೇಕೆರೂರಿನ(Hirekerur) ಕಚೇರಿಯಲ್ಲಿ ಭಾನುವಾರ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕುಗಳ ತಹಸಿಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿ, ತಾಲೂಕಿನ ಎಲ್ಲ ವೈದ್ಯಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಸಚಿವ ಬಿ.ಸಿ. ಪಾಟೀಲ ಅವರು, ಚಿಕಿತ್ಸೆಗೆ ಅವಶ್ಯವಿರುವ ಆಕ್ಸಿಜನ್(Oxygen), ವೆಂಟಿಲೇಟರ್ ಸೇರಿದಂತೆ ಎಲ್ಲ ರೀತಿಯ ಚಿಕಿತ್ಸಾ ಉಪಕರಣಗಳು ಹಾಗೂ ಔಷಧಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.