ಚಿಕ್ಕಬಳ್ಳಾಪುರ(ಏ.15): ನಗರದಲ್ಲಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ 17ನೇ ವಾರ್ಡನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. ಸೋಂಕು ಹರಡದಿರಲಿ ಎಂಬ ಉದ್ದೇಶದಿಂದ ಇಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಈ ಪ್ರದೇಶದಲ್ಲಿನ ಜನರು ಮನೆ ಬಿಟ್ಟು ಹೊರಗಡೆ ಬರದಂತೆ ತಡೆಲು ಪೊಲೀಸ್ ಇಲಾಖೆ ಸೂಕ್ತ ಭದ್ರತೆ ಕೈಗೊಂಡಿದೆ.