ಎಂಇಎಸ್ ಪುಂಡನ ಜೊತೆ ಸೆಲ್ಫಿ: ಇನ್‌ಸ್ಪೆಕ್ಟರ್‌ ಕಾಲಿಮಿರ್ಚಿಗೆ ಶಾಕ್ ಕೊಟ್ಟ ಸರ್ಕಾರ

Published : Nov 07, 2025, 09:58 AM IST

ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ ಎಂಇಎಸ್ ಮುಖಂಡ ಶುಭಂ ಶೆಳ್ಕೆ ಜೊತೆ ಸೆಲ್ಫಿ ತೆಗೆದುಕೊಂಡಿದ್ದಕ್ಕೆ ಮಾಳಮಾರುತಿ ಠಾಣೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ. 

PREV
14
ಸ್ಥಳ ತೋರಿಸದೇ ವರ್ಗಾವಣೆ

ಕರ್ನಾಟಕ ರಾಜ್ಯೋತ್ಸವದ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿದ ಎಂಇಎಸ್ ಪುಂಡ ಶುಭಂ ಶೆಳ್ಕೆ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದ ಮಾಳಮಾರುತಿ ಠಾಣೆ ಇನ್‌ಸ್ಪೆಕ್ಟರ್‌ ಜೆ.ಎಂ.ಕಾಲಿಮಿರ್ಚಿ ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿದೆ.

24
ತೆರವಾದ ಸ್ಥಳಕ್ಕೆ ಬಿ.ಆರ್.ಗಡೇಕರ್ ನೇಮಕ

ಎಂಇಎಸ್ ಮುಖಂಡ ಶುಭಂ ಶೆಳ್ಕೆ ಜೊತೆ ಸೆಲ್ಫಿ ಪಡೆಯುವ ಮೂಲಕ ವಿವಾದಕ್ಕೆ ಕಾರಣರಾಗಿದ್ದ ಕಾಲಿಮಿರ್ಚಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಸಿಪಿಐ ಜೆ.ಎಂ.ಕಾಲಿಮಿರ್ಚಿ ಅವರಿಂದ ತೆರವಾದ ಸ್ಥಾನಕ್ಕೆ ನಗರದ ಸಿಇಎನ್ ಸಿಪಿಐ ಬಿ.ಆರ್.ಗಡೇಕರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳ ತೋರಿಸದೆ ಜೆ.ಎಂ.ಕಾಲಿಮಿರ್ಚಿ ವರ್ಗಾವಣೆ ಮಾಡಲಾಗಿದೆ.‌

34
ಪುಂಡರ ಜೊತೆ ಆತ್ಮೀಯವಾಗಿ ಮಾತು

ಪೊಲೀಸ್‌ ಇಲಾಖೆ ಅನುಮತಿ ನೀಡದಿದ್ದರೂ ಎಂಇಎಸ್‌ ಮುಖಂಡರು ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನಾಚರಣೆ ಮಾಡುತ್ತಿದ್ದರು. ಈ ವೇಳೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಪಿಐ ಜೆ.ಎನ್‌.ಕಾಲಿಮಿರ್ಚಿ ಅವರು, ಶುಭಂ ಶೆ‍ಳ್ಕೆ ಜೊತೆಗೆ ಆತ್ಮೀಯವಾಗಿ ಮಾತನಾಡಿದ್ರು.

 ಕಾಲಿಮಿರ್ಚಿ ಅವರು ಶೆಳ್ಕೆ ಜೊತೆಗೆ ತಮ್ಮ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದಕ್ಕೆ ಕನ್ನಡಪರ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಮಹಿಳಾ-ಮಕ್ಕಳ ಇಲಾಖೆಯನ್ನು ನಂ.1 ಮಾಡುವುದು ನನ್ನ ಗುರಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

44
ಎಂಇಎಸ್‌ ಮುಖಂಡರ ವಿರುದ್ಧ ಪ್ರಕರಣ

ಕರ್ನಾಟಕ ರಾಜ್ಯೋತ್ಸವ ದಿನದಂದೇ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಕರಾಳ ದಿನಾಚರಣೆ ಮಾಡಿದ ಹಿನ್ನೆಲೆಯಲ್ಲಿ ಬೆಳಗಾವಿ ಮಾರ್ಕೆಟ್ ಪೊಲೀಸರು 150ಕ್ಕೂ ಅಧಿಕ ಎಂಇಎಸ್‌ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಎಂಇಎಸ್ ಮಾಜಿ ಶಾಸಕ ಮನೋಹರ ಕಿನೇಕರ್, ಶುಭಂ ಶೇಳಕೆ ಸೇರಿದಂತೆ 150 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. 

ಕೇಸ್‌ ದಾಖಲಾಗುತ್ತಿದ್ದಂತೆ ಆರೋಪಿಗಳು ಬೆಳಗಾವಿಯಿಂದ ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಲು ಬೆಳಗಾವಿ ಮಾರ್ಕೆಟ್‌ ಪೊಲೀಸರು ಬಲೆ ಬೀಸಿದ್ದಾರೆ.

ಇದನ್ನೂ ಓದಿ: BJP: ಕರ್ನಾಟಕ ರಾಜಕಾರಣ ಕುರಿತು ಮಹತ್ವದ ಸುಳಿವು ನೀಡಿದ ಬಿಜೆಪಿ ಶಾಸಕ ಸುನಿಲ್ ಕುಮಾರ್

Read more Photos on
click me!

Recommended Stories