ಇಬ್ಬರೂ ಗಂಭೀರ ಸ್ಥಿತಿಯಲ್ಲಿದ್ದುದನ್ನು ಕಂಡ ಸ್ಥಳೀಯರು ಸಚಿನ್ ಮತ್ತು ಸುಜಾತಾಳನ್ನು ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿ ಆಗಿದೇ ಇಬ್ಬರೂ ಪ್ರೇಮಿಗಳು ಸಾವನ್ನಪ್ಪಿದ್ದಾರೆ. ನನ್ನ ಸಹೋದರಿ ಸುಜಾತಾಗೆ ಸಚಿನ್ ಎಂಬಾತನೇ ಬಲವಂತವಾಗಿ ವಿಷ ಕುಡಿಸಿದ್ದಾನೆ ಎಂದು ಸಹೋದರಿ ಗೀತಾ ಆರೋಪ ಮಾಡಿದ್ದಾರೆ.
ಒಟ್ಟಾರೆಯಾಗಿ, ಈ ಹೃದಯವಿದ್ರಾವಕ ಘಟನೆಯಿಂದ ಕುಟುಂಬ, ಗ್ರಾಮಸ್ಥರು ಶೋಕದಲ್ಲಿ ಮುಳುಗಿದ್ದಾರೆ. ಆದರೆ, ಸುಜಾತಾಳ ಇಬ್ಬರು ಸಣ್ಣ ಮಕ್ಕಳ ಭವಿಷ್ಯ ಅನಿಶ್ಚಿತತೆಯ ಕತ್ತಲಲ್ಲಿ ಸಿಲುಕಿದೆ. ಈ ಘಟನೆ ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.