ಚಾಮುಂಡಿ ತಾಯಿ ಕ್ಷೇತ್ರದಿಂದ ಗೃಹ'ಲಕ್ಷ್ಮೀ'ಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವೆ ಹೆಬ್ಬಾಳ್ಕರ್

Published : Sep 23, 2025, 07:58 PM IST

ಮೈಸೂರಿನಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. ಈ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸರ್ಕಾರ ಒತ್ತು ನೀಡಿದೆ.

PREV
15
ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್ ನೀಡಿದ ಸಚಿವೆ ಹೆಬ್ಬಾಳ್ಕರ್

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ರಾಜ್ಯದ ಗೃಹಲಕ್ಷ್ಮೀಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮೈಸೂರು ದಸರಾ ಪ್ರಯುಕ್ತ ಜೆಕೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದರು. ಸಚಿವರೇ ಕಾರ್ಯಕ್ರಮವನ್ನು ಉದ್ಘಾಟಿಸಿದರು.

25
ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಬದುಕು ಸುಧಾರಣೆ

ಈ ವೇಳೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆ ಅಂದ್ರೆ ಸ್ವಾವಲಂಬನೆಯ ಪ್ರತೀಕ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಿಂದ ರಾಜ್ಯದ ಜನತೆಗೆ ಅನುಕೂಲವಾಗಿದೆ. ಗೃಹಲಕ್ಷ್ಮೀ ಯೋಜನೆಯಿಂದಾಗಿ ಮಹಿಳೆಯರು ಬದುಕು ಸುಧಾರಣೆ ಕಂಡಿದೆ ಎಂದು ತಿಳಿಸಿದರು.

35
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆ

ಮಹಿಳೆಯರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂಬ ಚಿಂತನೆಯಿಂದ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಯನ್ನು ತಂದಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಸಿಗಬೇಕು ಎಂಬುವುದು ಸರ್ಕಾರದ ಉದ್ದೇಶವಾಗಿದೆ. ಮಹಿಳೆಯರನ್ನು ಕೇಂದ್ರಿಕೃತವಾಗಿಟ್ಟುಕೊಂಡು ರಾಜ್ಯ ಸರ್ಕಾರ ಯೋಜನೆಗಳನ್ನು ತಂದಿವೆ. ಮಹಿಳೆಯರು ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

45
ಹೆಬ್ಬಾಳ್ಕರ್ ನೀಡಿದ ಗುಡ್‌ನ್ಯೂಸ್ ಏನು?

ಮಹಿಳೆಯರಿಗೆ ಬ್ಯಾಂಕ್‌ಗಳಲ್ಲಿ ಸಾಲ ಸಿಗುತ್ತಿಲ್ಲ. ಸಾಲ ಸೌಲಭ್ಯ ಸಿಗದೇ ಇರೋದರಿಂದ ಮಹಿಳೆಯರಿಗೆ ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆ ರಾಜ್ಯ ಸರ್ಕಾರದ ಗಮನಕ್ಕೆ ಬಂದಿದ್ದು, ಗೃಹಲಕ್ಷ್ಮೀ ಫಲಾನುಭವಿಗಳ ಹೆಸರಿನಲ್ಲಿ ಸಹಕಾರ ಸಂಘ ಆರಂಭಿಸಲು ಚಿಂತನೆ ನಡೆಲಾಗಿದೆ ಎಂಬ ಸಿಹಿ ಸುದ್ದಿಯೊಂದನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಂಚಿಕೊಂಡರು.

ಇದನ್ನೂ ಓದಿ: DMK ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಅಣ್ಣಾಮಲೈ; ಕೇಂದ್ರ ಸಚಿವ ಅಮಿತ್ ಶಾ ನಿಗಿ ನಿಗಿ ಕೆಂಡ!

55
ಸ್ವಾಭಿಮಾನ, ಸಮೃದ್ಧಿ ಮತ್ತು ತಾಳ್ಮೆ ಶಕ್ತಿಯ ಪ್ರತೀಕವೇ ಈ ದಸರಾ

ಮುಂದುವರಿದು ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಯರ ಸ್ವಾಭಿಮಾನ, ಸಮೃದ್ಧಿ ಮತ್ತು ತಾಳ್ಮೆ ಶಕ್ತಿಯ ಪ್ರತೀಕವೇ ಈ ದಸರಾ. ದುಷ್ಟರನ್ನು ಸಂಹಾರ ಮಾಡಿ ಶಿಷ್ಟರ ರಕ್ಷಣೆ ಮಾಡಿರುವ ದೇವಿಯ ಆರಾಧನೆ ಮಾಡುವುದು ನಾಡಹಬ್ಬವಾಗಿದೆ. ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ನೀಡಿದವರು ಮಹಿಳೆಯರು. ನಮ್ಮ ಸರ್ಕಾರವು ನಾಡಹಬ್ಬ ದಸರಾವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

Read more Photos on
click me!

Recommended Stories