ನಿದ್ದೆಗಣ್ಣಿನಲ್ಲಿರುವ ರೈತ ವಿರೋಧಿ ಸರ್ಕಾರದ ಕಣ್ಣು ತೆರೆಸಬೇಕಾಗಿದೆ: ಸಿದ್ದರಾಮಯ್ಯ

First Published | Oct 27, 2020, 1:16 PM IST

ಜೇವರ್ಗಿ(ಅ.27): ಅತಿವೃಷ್ಟಿ, ಪ್ರವಾಹದಿಂದ ರೈತಾಪಿ ವರ್ಗ ಹಾಗೂ ಭೀಮಾ ತೀರದ ಗ್ರಾಮಸ್ಥರು ತಮ್ಮ ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಕೂಡಲೇ ನೊಂದವರಿಗೆ ಸಮರ್ಪಕ ಪರಿಹಾರದ ಜೊತೆಗೆ ಸೂರು ಕಲ್ಪಿಸಿ ಕೊಡಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಸೋಮವಾರ ತಾಲೂಕಿನ ಪ್ರವಾಹ ಪೀಡಿತ ಕಟ್ಟಿಸಂಗಾವಿ ಗ್ರಾಮಕ್ಕೆ ಭೇಟಿ ನೀಡಿ ನೆರೆ ಹಾವಳಿಯಿಂದ ಹಾನಿಗೀಡಾದ ಮನೆಗಳ ಹಾಗೂ ಬೆಳೆ ಪರಿಶೀಲಿಸಿದ ಸಿದ್ದರಾಮಯ್ಯ
undefined
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾನದಿಗೆ 8.50 ಲಕ್ಷ ಕ್ಯುಸೆಕ್‌ ನೀರು ಹರಿಬಿಟ್ಟ ಪರಿಣಾಮ ಜೇವರ್ಗಿ ಸೇರಿದಂತೆ ಕಲಬುರಗಿ, ಅಫಜಲ್‌ಪುರ ಹಾಗೂ ನೆರೆಯ ವಿಜಯಪುರ ಜಿಲ್ಲೆಯ ನೂರಾರು ಗ್ರಾಮಗಳು ಜಲಾವೃತಗೊಂಡು ಲಕ್ಷಾಂತರ ಹೆಕ್ಟೇರ್‌ ಬೆಳೆ ಹಾನಿಯಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದ ಸಿದ್ದರಾಮಯ್ಯ
undefined

Latest Videos


ಇತ್ತೀಚೆಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಂದಾಯ ಸಚಿವ ಆರ್‌.ಅಶೋಕ ಕಾಟಾಚಾರಕ್ಕೆ ಭೇಟಿ ನೀಡಿ ರೈತರ ಹಾಗೂ ನೆರೆ ಪೀಡಿತರ ಸಂಕಷ್ಟ ಆಲಿಸದೆ ಹೋಗಿದ್ದಾರೆ. ನಿದ್ದೆಗಣ್ಣಿನಲ್ಲಿರುವ ಇಂತಹ ರೈತ ವಿರೋಧಿ ಸರ್ಕಾರದ ಕಣ್ಣು ತೆರೆಸಬೇಕಾಗಿದೆ. ಕಳೆದ ಎರಡು ದಿನಗಳಿಂದ ಈ ಭಾಗದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕೋಟ್ಯಂತರ ಮೌಲ್ಯದ ಬೆಳೆ ಹಾಗೂ ಆಸ್ತಿ, ಪಾಸ್ತಿ ಹಾನಿಯಾಗಿದೆ. ರಾಜ್ಯ ಸರ್ಕಾರ ಕೂಡಲೇ ನೆರೆ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.
undefined
ಪ್ರವಾಹದಿಂದ ಮುಳುಗಡೆಯಾದ ಕಟ್ಟಿಸಂಗಾವಿ ಗ್ರಾಮ ಸ್ಥಳಾಂತರಿಸಬೇಕು ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.
undefined
ಈ ಸಂದರ್ಭದಲ್ಲಿ ಜೇವರ್ಗಿ ಶಾಸಕ ಡಾ.ಅಜಯಸಿಂಗ್‌, ಅಫಜಲ್‌ಪುರ ಶಾಸಕ ಎಂ.ವೈ ಪಾಟೀಲ್‌, ಶಹಾಪೂರ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೇದಾರ, ಮಾಜಿ ಶಾಸಕರಾದ ಅಲ್ಲಮಪ್ರಭು ಪಾಟೀಲ, ಬಿ.ಆರ್‌.ಪಾಟೀಲ, ತಿಪ್ಪಣ್ಣಪ್ಪ ಕಮಕನೂರ, ಜೇವರ್ಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿದ್ಧಲಿಂಗರೆಡ್ಡಿ ಇಟಗಿ, ಯಡ್ರಾಮಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರುಕುಂಪಟೇಲ ಇಜೇರಿ ಇದ್ದರು.
undefined
click me!