'CID ವರದಿ ಟ್ರಾನ್ಸ್‌ಲೇಟ್‌ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ..' ಧರ್ಮಸ್ಥಳ Soujanya Case ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಚಾಟಿ

Published : Jul 22, 2026, 05:32 PM IST

ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.

PREV
16
ದ್ವಿಸದಸ್ಯ ಪೀಠ ನಡೆಸಿದ ವಿಚಾರಣೆ

ಭಾರಿ ಚರ್ಚೆಗೆ ಗ್ರಾಸವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ತನ್ನ ಆದೇಶವನ್ನು ಕಾಯ್ದಿರಿಸಿದೆ. ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು.

26
ಮರು ತನಿಖೆಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಪೀಠ

ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು, ತನಿಖೆಯನ್ನು ಯಾವ ಸ್ವರೂಪದಲ್ಲಿ ನಡೆಸಬೇಕು ಎನ್ನುವುದರ ಕುರಿತು ತನ್ನ ತೀರ್ಪನ್ನು ಕಾಯ್ದಿರಿಸಿದೆ. ಅಂತಿಮ ಆದೇಶದಲ್ಲಿ ಈ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.

36
ಸಿಬಿಐ ತನಿಖಾ ವೈಫಲ್ಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ತರಾಟೆ

ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಿಬಿಐ (CBI) ಕಾರ್ಯವೈಖರಿಯನ್ನು ಕಟುವಾಗಿ ತರಾಟೆಗೆ ತೆಗೆದುಕೊಂಡಿತು. "ಪರಕರಣ ನಡೆದು 14 ವರ್ಷಗಳಾಗಿದ್ದರೂ ಸರಿಯಾದ ತನಿಖೆ ನಡೆದಿಲ್ಲ. ಸಿಐಡಿ ನೀಡಿದ್ದ ವರದಿಯನ್ನಷ್ಟೇ ಭಾಷಾಂತರಿಸಲಾಗಿದೆ ಹೊರತು, ತನಿಖಾಧಿಕಾರಿ ಘಟನಾ ಸ್ಥಳಕ್ಕೂ ಭೇಟಿ ನೀಡಿಲ್ಲ. ಕೆಳಹಂತದ ನ್ಯಾಯಾಲಯದಲ್ಲಿ ಇನ್ನು ಕೆಲ ಆರೋಪಿಗಳ ವಿರುದ್ಧ ತನಿಖೆ ನಡೆಸಬೇಕಿದೆ ಎಂದು ಹೇಳಿದ್ದ ಸಿಬಿಐ, ಈಗ ಸಿಬ್ಬಂದಿ ಹಾಗೂ ಹಣಕಾಸಿನ ಕೊರತೆ ಎಂದು ನೆಪ ಹೇಳುತ್ತಿರುವುದು ಸಮಂಜಸವಲ್ಲ ಎಂದು ಕೋರ್ಟ್ ಕಿಡಿಕಾರಿತು.

46
ಎಸ್‌ಐಟಿ (SIT) ರಚನೆಗೆ ರಾಜ್ಯ ಸರ್ಕಾರ ಸಿದ್ಧ

ಸೌಜನ್ಯ ತಾಯಿ ಕುಸುಮಾವತಿ ಅವರು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರ್ಕಾರ, ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ತಾವು ಸಿದ್ಧರಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

56
ಎಸ್‌ಐಟಿ ರಚನೆ ಕುರಿತು ಸುಪ್ರೀಂ ನಿರ್ಧಾರ

ಪ್ರಕರಣದ ತನಿಖೆಗೆ ಎಸ್‌ಐಟಿ ರಚಿಸಬೇಕೇ ಅಥವಾ ಇತರ ಯಾವುದೇ ಸಂಸ್ಥೆಗೆ ವಹಿಸಬೇಕೇ ಎಂಬುದನ್ನು ತಾನೇ ನಿರ್ಧರಿಸುವುದಾಗಿ ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೆ, ಆದೇಶ ಪ್ರಕಟಿಸಿದ ಬಳಿಕ ಈ ತನಿಖೆಗೆ ಸಂಬಂಧಿಸಿದಂತೆ ಮಧ್ಯಂತರ ವರದಿಯನ್ನು ಕೇಳುವುದಾಗಿ ನ್ಯಾಯಪೀಠ ಹೇಳಿದೆ.

66
ಸಾಕ್ಷಿಗಳಿಗೆ ಭದ್ರತೆ ಮುಂದುವರಿಕೆಗೆ ಸೂಚನೆ

ಪ್ರಕರಣ ನಡೆದ ಇಷ್ಟೂ ವರ್ಷಗಳಲ್ಲಿ ಸಾಕ್ಷ್ಯಗಳು ನಾಶವಾಗದಂತೆ ಮತ್ತು ಸಾಕ್ಷಿಗಳಿಗೆ ಯಾವುದೇ ಅಪಾಯ ಎದುರಾಗದಂತೆ ಅವರಿಗೆ ನೀಡಲಾಗಿರುವ ಭದ್ರತೆಯನ್ನು ಮುಂದುವರಿಸಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Read more Photos on
click me!

Recommended Stories