ರಾಯಚೂರು(ಮಾ.11): ಇಂದು ದೇಶಾದ್ಯಂತ ಮಹಾ ಶಿವರಾತ್ರಿ ಹಬ್ಬವನ್ನ ಭಕ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಶಿವನ ಕೃಪೆಗೆ ಒಳಗಾಗಲು ರಾಜ್ಯದ ವಿವಿಧ ದೇವಾಲಯಗಳಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆಗಳನ್ನ ಮಾಡುತ್ತಿದ್ದಾರೆ. ಇಂದು ಉಪವಾಸ ಇರುವ ಮೂಲಕ ಶಿವನ ಧ್ಯಾನವನ್ನ ಮಾಡುತ್ತಿದ್ದಾರೆ. ಅದೇ ರೀತಿ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ರುದ್ರಾಭಿಷೇಕವನ್ನ ಮಾಡಿದ್ದಾರೆ.