ಬೆಂಗಳೂರು-ಕನಕಪುರ ಹೆದ್ದಾರಿಯ ಅಗ್ರ ಕ್ರಾಸ್ ಬಳಿ ಕಾರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು-ಕನಕಪುರ ಹೆದ್ದಾರಿಯಲ್ಲಿ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ರಾತ್ರಿ ಸುಮಾರು 8 ಗಂಟೆಗೆ ಅಪಘಾತ ನಡೆದಿದೆ. ಕಾರ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ.
24
ಮೂವರ ಸಾವು
ಕಾರ್‌ನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ನಾಲ್ವರಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
34
ಅಗ್ರ ಕ್ರಾಸ್ ಬಳಿ ಅಪಘಾತ
ಮೃತರನ್ನು ಸೈಯದ್ ಪಾಷ (22) ,ಯೂನಿಪ್ ಬಾನ್ (23) ,ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಕಗ್ಗಲಿಪುರ ವ್ಯಾಪ್ತಿಯ ಅಗ್ರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಮೃತದೇಹಗಳನ್ನು ಮರಣೋತ್ತರ ಶವ ಪರೀಕ್ಷೆಗಾಗಿ ರಾಜರಾಜೇಶ್ವರಿ ನಗರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೇ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲಿಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.