ಜಮಖಂಡಿ ಬಳಿ ಭೀಕರ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ 2 ವರ್ಷದ ಮಗು ಸೇರಿದಂತೆ ನಾಲ್ವರ ಸಾವು

Published : Feb 21, 2026, 08:46 AM IST

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಬಳಿ ಇಳಿಜಾರಿನಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ, ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮಹಾರಾಷ್ಟ್ರ ಮೂಲದ ಕಬ್ಬು ಕಟಾವು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

PREV
14
ಟ್ರ್ಯಾಕ್ಟರ್ ಪಲ್ಟಿ

ಟ್ರ್ಯಾಕ್ಟರ್ ಪಲ್ಟಿಯಾಗಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಕಟ್ಟೆ ಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

24
ಮಹಾರಾಷ್ಟ್ರ ಮೂಲದವರು

ಈ ಭೀಕರ ಅಪಘಾತದಲ್ಲಿ ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಮಹಾರಾಷ್ಟ್ರ ಮೂಲದವರು ಎಂದು ತಿಳಿದು ಬಂದಿದೆ.

34
ಟ್ರ್ಯಾಕ್ಟರ್ ಟ್ರ್ಯಾಲಿ ಕಟ್

ಮೃತರನ್ನು ಮನೀಷ್ ಪಾಂಡೆ‌ (23), ಹಲಕಿ ಪಾಂಡೆ(2), ಲಕ್ಷ್ಮಿ ಚಿರಮಡಿ(27) ಮತ್ತು ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಟ್ರ್ಯಾಲಿ ಕಟ್ ಆಗಿದ್ದರಿಂದ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸ್ಥಳ ಇಳಿಜಾರು ಆಗಿದ್ದಿರಂದ ಟ್ರ್ಯಾಲಿ ಹಿಂಭಾಗಕ್ಕೆ ಕುಸಿತವಾಗಿದೆ.

ಇದನ್ನೂ ಓದಿ: ಕಲಬುರಗಿ: ಪರೀಕ್ಷೆಯಲ್ಲಿ ನಕಲು ಪ್ರಶ್ನಿಸಿದ್ದಕ್ಕೆ ಪ್ರೊಫೆಸರ್ ಮೇಲೆಯೇ ಹಲ್ಲೆ ಮಾಡಿದ ಮೆಡಿಕಲ್ ವಿದ್ಯಾರ್ಥಿ

44
ಮಖಂಡಿ ಪೊಲೀಸರು

ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆ ಬೂಸಾ ತಾಲಕಿನ ಗುಪವಾಡಿ ಗ್ರಾಮದ ನಿವಾಸಿಗಳು. ಮೃತರು ಕುಟಂಬ ಸಮೇತರಾಗಿ ರಾಜ್ಯಕ್ಕೆ ಕಬ್ಬು ಕಟಾವು ಕೆಲಸಕ್ಕಾಗಿ ಆಗಮಿಸಿದ್ದರು. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಶಿಫ್ಟ್ ಆಗುವ ಸಂದರ್ಭದಲ್ಲಿ ಅಪಘಾತ ನಡೆದಿದೆ. ಜಮಖಂಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ  ಓದಿ: Comedy Kiladigalu ದೇವತೆಗಳ ಅವಹೇಳನ ಕೇಸ್: 'ಕಾಮಿಡಿ ಕಿಲಾಡಿ'ತೀರ್ಪುಗಾರರಿಗೂ ಪೊಲೀಸ್ ನೋಟಿಸ್, ಕೋರ್ಟ್ ಮೆಟ್ಟಿಲೇರಿದ ಝೀ!

Read more Photos on
click me!

Recommended Stories