ತುಮಕೂರು ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನಿಗೂಢ ಸಾವು; ತಂದೆ-ತಾಯಿ ಹೇಳಿಕೆಯಿಂದ ಪೊಲೀಸರಿಗೆ ಅನುಮಾನ!

Published : Aug 23, 2025, 10:45 AM IST

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಿದ್ದನಕಟ್ಟೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಅಶ್ವಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ. ಹೊಟ್ಟೆನೋವೆಂದು ಪೋಷಕರ ಹೇಳಿಕೆ, ಪೊಲೀಸರಿಗೆ ಅನುಮಾನ.

PREV
14

ತುಮಕೂರು/ಚಿಕ್ಕನಾಯಕನಹಳ್ಳಿ (ಆ.23): ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

24

ಅಶ್ವಿನಿ (20) ಮೃತ ದುರ್ದೈವಿ. ದೇವರಾಜು ಮತ್ತು ನಾಗರತ್ನಮ್ಮ ದಂಪತಿಯ ಪುತ್ರಿಯಾಗಿರುವ ಅಶ್ವಿನಿ, ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯಾಗಿ ವ್ಯಾಸಂಗ ಮಾಡುತ್ತಿದ್ದಳು. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆಕೆ ಆತ್ಮಹ*ತ್ಯೆಗೆ ಶರಣಾಗಿದ್ದಾಳೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಆದರೆ, ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

34

ಮಗಳ ಸಾವಿನ ಕುರಿತು ಪೋಷಕರು ನೀಡಿದ ಹೇಳಿಕೆ ಪೊಲೀಸರಲ್ಲಿ ಅನುಮಾನ ಮೂಡಿಸಿದೆ. ಅಶ್ವಿನಿ ಹೊಟ್ಟೆ ನೋವಿನಿಂದಾಗಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ದೂರು ನೀಡಿದ್ದಾರೆ. ಆದರೆ, ಈ ರೀತಿಯ ಹೇಳಿಕೆ ಘಟನೆಯ ಹಿಂದಿನ ನಿಜವಾದ ಕಾರಣವನ್ನು ಮರೆಮಾಚುವ ಪ್ರಯತ್ನವಾಗಿರಬಹುದೆಂಬ ಸಂಶಯ ಪೊಲೀಸರನ್ನು ಕಾಡುತ್ತಿದೆ.

44

ಈ ಕುರಿತು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಶ್ವಿನಿಯ ಸಾವಿನ ಹಿಂದಿನ ರಹಸ್ಯವನ್ನು ಭೇದಿಸಲು ಪೊಲೀಸರು ಆಕೆಯ ಸ್ನೇಹಿತರು, ಸಹಪಾಠಿಗಳು ಮತ್ತು ಕುಟುಂಬದ ಸದಸ್ಯರನ್ನು ವಿಚಾರಣೆ ಮಾಡುವ ಸಾಧ್ಯತೆ ಇದೆ. ಅಶ್ವಿನಿಯ ಮರಣೋತ್ತರ ಪರೀಕ್ಷೆಯ ವರದಿ ಕೂಡ ಪ್ರಕರಣದ ಮುಂದಿನ ತನಿಖೆಗೆ ಮಹತ್ವದ ಸುಳಿವು ನೀಡಲಿದೆ.

Read more Photos on
click me!

Recommended Stories