V Somanna: ಮಲೆನಾಡಿಗರಿಗೆ ಬಿಗ್ ಅಪ್‌ಡೇಟ್; ಪ್ರಮುಖ ರೈಲ್ವೆ ಯೋಜನೆಗೆ ಭೂಸ್ವಾಧೀನ

Published : Oct 12, 2026, 12:30 PM IST

ಕೇಂದ್ರ ಸಚಿವ ವಿ. ಸೋಮಣ್ಣ ಅವರು ಶಿವಮೊಗ್ಗದಲ್ಲಿ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೋಟೆಗಂಗೂರು ಡಿಪೋ, ಭದ್ರಾವತಿ ನಿಲ್ದಾಣ ಅಭಿವೃದ್ಧಿ ಹಾಗೂ ಹೊಸ ರೈಲ್ವೆ ಮಾರ್ಗಗಳ ಭೂಸ್ವಾಧೀನ ವಿಳಂಬದ ಕುರಿತು ಚರ್ಚಿಸಲಾಯಿತು.

PREV
14
ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿ, ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

24
ಕೋಚಿಂಗ್ ಡಿಪೋ ಕಾಮಗಾರಿ, ಭದ್ರಾವತಿ ರೈಲ್ವೆ ನಿಲ್ದಾಣದ ಅಭಿವೃದ್ಧಿ

ಈ ಸಭೆಯಲ್ಲಿ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆಯುತ್ತಿರುವ ರೈಲ್ವೆ ಕೋಚಿಂಗ್ ಡಿಪೋ ಕಾಮಗಾರಿ, ಭದ್ರಾವತಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಹಾಗೂ ಬೀರೂರು ಸಮೀಪದ ರಸ್ತೆ ಅಂಡರ್ ಬ್ರಿಡ್ಜ್ (RUB) ಕಾಮಗಾರಿಗಳ ಕುರಿತು ಸುದೀರ್ಘವಾಗಿ ಪರಿಶೀಲಿಸಲಾಯಿತು.

34
ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ಹಾಗೂ ಶಿವಮೊಗ್ಗ–ಹರಿಹರ ಹೊಸ ರೈಲ್ವೆ ಮಾರ್ಗ

96 ಕಿ.ಮೀ ಉದ್ದದ ಶಿವಮೊಗ್ಗ–ಶಿಕಾರಿಪುರ–ರಾಣೆಬೆನ್ನೂರು ಹಾಗೂ ಶಿವಮೊಗ್ಗ–ಹರಿಹರ ಹೊಸ ರೈಲ್ವೆ ಮಾರ್ಗ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಸಚಿವ ವಿ ಸೋಮಣ್ಣ, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಉಂಟಾಗಿರುವ ವಿಳಂಬ ಮತ್ತು ಕಾಮಗಾರಿಗಳು ಸ್ಥಗಿತಗೊಂಡಿರುವ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸಿದರು.

44
ಪರಿಶೀಲನಾ ಸಭೆಯಲ್ಲಿ ಹಿರಿಯ ಅಧಿಕಾರಿಗಳು ಭಾಗಿ

ಈ ಪರಿಶೀಲನಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವ ಆರಗ ಜ್ಞಾನೇಂದ್ರ, ಶಾಸಕ ಚನ್ನಬಸಪ್ಪ, ಎಂಎಲ್ಸಿ ಧನಂಜಯ ಸರ್ಜಿ ಹಾಗೂ ನೈರುತ್ಯ ರೈಲ್ವೆ, ಜಿಲ್ಲಾಡಳಿತದ ಡಿಸಿ, ಎಸ್‌ಪಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Read more Photos on
click me!

Recommended Stories