ಧಗ ಧಗನೆ ಹೊತ್ತಿ ಉರಿದ ಹೊಸಪೇಟೆಯ ತಾಲೂಕು ಪಂಚಾಯತಿ : ಹಲವು ದಾಖಲೆಗಳು ಬೆಂಕಿಗಾಹುತಿ

Published : Mar 11, 2026, 09:41 AM IST

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಹಲವು ಹಳೆಯ ದಾಖಲೆಗಳು ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ. ಇದು ಕಿಡಿಗೇಡಿಗಳ ಕೃತ್ಯವೇ ಅಥವಾ ಉದ್ದೇಶಪೂರ್ವಕ ಘಟನೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

PREV
15
ಧಗ ಧಗನೆ ಹೊತ್ತಿ ಉರಿದ ತಾಲೂಕು ಪಂಚಾಯತಿ ಕಾರ್ಯಾಲಯ

ವಿಜಯನಗರ: ಜಿಲ್ಲೆಯ ಹೊಸಪೇಟೆ ತಾಲೂಕು ಪಂಚಾಯಿತಿ ಕಚೇರಿಗೆ ತಡರಾತ್ರಿ ಬೆಂಕಿ ಬಿದ್ದಿದ್ದು, ತಾಲೂಕು ಪಂಚಾಯತಿ ಕಾರ್ಯಾಲಯ ಧಗ ಧಗನೆ ಹೊತ್ತಿ ಉರಿದಿದೆ.

25
ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಬೆಂಕಿ

ಹೊಸಪೇಟೆಯ ಸಂಡೂರು ರಸ್ತೆಯಲ್ಲಿರೋ ತಾಲೂಕು ಪಂಚಾಯತಿ ಕಾರ್ಯಾಲಯಕ್ಕೆ ಬೆಂಕಿ ಬಿದ್ದಿದ್ದರಿಂದ ಹಲವು ದಾಖಲೆಗಳು ಸುಟ್ಟು ಕರಕಲಾಗಿವೆ..

35
ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಕಾರ್ಯಾಲಯದ ಸಭಾಂಗಣ ಆವರಣ ಹೊತ್ತಿ ಉರಿದಿದ್ದು, ಸ್ಥಳಕ್ಕೆ ಹೊಸಪೇಟೆ ತಹಸೀಲ್ದಾರ್ ಶೃತಿ ಹಾಗೂ ಪೊಲೀಸರು ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

45
ಕಿಡಿಗೇಡಿಗಳ ಕೃತ್ಯನಾ

ಇದು ಕಿಡಿಗೇಡಿಗಳ ಕೃತ್ಯನಾ ಅಥವಾ ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆಯಾ ಎಂಬ ಬಗ್ಗೆ ತನಿಖೆ ನಡೆಸಬೇಕಿದೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

55
ಪೀಠೋಪಕರಣಗಳು ಬೆಂಕಿಗಾಹುತಿ

ತಾಲೂಕು ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಬಹುತೇಕ ಹಳೇಯ ಫೈಲ್‌ಗಳು ಮತ್ತು ಪೀಠೋಪಕರಣಗಳು ಬೆಂಕಿಗಾಹುತಿಯಾಗಿದೆ.

ಇದನ್ನೂ ಓದಿ:  ರಿಲಯನ್ಸ್ ಇಂಡಸ್ಟ್ರೀಸ್‌ನಿಂದ ಅಮೆರಿಕಾದಲ್ಲಿ ಭಾರಿ ಹೂಡಿಕೆ: ಟೆಕ್ಸಾಸ್‌ನಲ್ಲಿ ತೈಲ ಸಂಸ್ಕರಣಾಗಾರ ಸ್ಥಾಪನೆಗೆ ಒಪ್ಪಂದ: ಟ್ರಂಪ್ ಶ್ಲಾಘನೆ

Read more Photos on
click me!

Recommended Stories