Published : Aug 09, 2020, 01:44 PM ISTUpdated : Aug 09, 2020, 01:47 PM IST
ಹಾವೇರಿ(ಆ.09): ಪ್ರವಾಹದಲ್ಲಿ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಇನಾಂಲಕಮಾಪುರ ಗ್ರಾಮದಲ್ಲಿ ನಡೆದಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ವರದಾ ನದಿ ತುಂಬಿ ಹರಿಯುತ್ತಿದೆ. ಜಿಲ್ಲೆಯ ಎಲ್ಲ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಜಮೀನುಗಳಿಗೆ ನೀರು ನುಗ್ಗಿದ ಪರಿಣಾಮ ರೈತರು ಕಂಗಾಲಾಗಿದ್ದಾರೆ.