ಲಿವರ್‌ನ ಜೀವಕೋಶಗಳಲ್ಲಿ ಕೊಬ್ಬು ಹೆಚ್ಚಾಗಿ ಶೇಖರಣೆಯಾಗುವ ಸ್ಥಿತಿಯನ್ನೇ ಫ್ಯಾಟಿ ಲಿವರ್ ಎನ್ನುತ್ತಾರೆ. ಅಧಿಕ ತೂಕ, ಕೆಟ್ಟ ಆಹಾರ ಪದ್ಧತಿ, ಅತಿಯಾದ ಮದ್ಯಪಾನ ಸೇರಿದಂತೆ ಹಲವು ಕಾರಣಗಳಿಂದ ಈ ಸಮಸ್ಯೆ ಬರಬಹುದು. ನಿಮ್ಮ ಆಹಾರ ಕ್ರಮದಲ್ಲಿ ಈ ಬದಲಾವಣೆಗಳನ್ನು ಮಾಡಿಕೊಳ್ಳಿ.
ಸಾಫ್ಟ್ ಡ್ರಿಂಕ್ಸ್ ಮತ್ತು ಸಂಸ್ಕರಿಸಿದ ಆಹಾರಗಳಲ್ಲಿ ಫ್ರಕ್ಟೋಸ್‌ನಂತಹ ಸಕ್ಕರೆ ಅಂಶ ಹೆಚ್ಚಿರುತ್ತದೆ. ಇದರ ಅತಿಯಾದ ಸೇವನೆಯೇ ಫ್ಯಾಟಿ ಲಿವರ್‌ಗೆ ಪ್ರಮುಖ ಕಾರಣಗಳಲ್ಲಿ ಒಂದು. ಹೀಗಾಗಿ, ಸಕ್ಕರೆ ಬೆರೆಸಿದ ಆಹಾರಗಳನ್ನು ಆದಷ್ಟು ಅವಾಯ್ಡ್ ಮಾಡಿ.
25
ಹಣ್ಣು ಮತ್ತು ತರಕಾರಿಗಳನ್ನು ತಿನ್ನಿ
ಹಣ್ಣು, ತರಕಾರಿಗಳಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು ಮತ್ತು ಅಗತ್ಯ ವಿಟಮಿನ್‌ಗಳು ಹೇರಳವಾಗಿವೆ. ಇವು ಲಿವರ್‌ನ ಕಾರ್ಯನಿರ್ವಹಣೆಗೆ ಸಹಾಯ ಮಾಡುತ್ತವೆ. ಬಗೆಬಗೆಯ ಬಣ್ಣದ ತರಕಾರಿಗಳು ಮತ್ತು ಹಣ್ಣುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಲು ಪ್ರಯತ್ನಿಸಿ.
35
ಧಾನ್ಯಗಳನ್ನು ಡಯಟ್‌ನಲ್ಲಿ ಸೇರಿಸಿ
ಕುಚ್ಚಲಕ್ಕಿ, ಓಟ್ಸ್‌ನಂತಹ ಧಾನ್ಯಗಳಲ್ಲಿ ಫೈಬರ್ ಮತ್ತು ಪೋಷಕಾಂಶಗಳು ಹೇರಳವಾಗಿವೆ. ಇವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತವೆ. ಜೊತೆಗೆ, ಆರೋಗ್ಯಕರ ತೂಕ ಕಾಪಾಡಿಕೊಳ್ಳಲು ಸಹಾಯ ಮಾಡಿ ಫ್ಯಾಟಿ ಲಿವರ್ ಸಮಸ್ಯೆಯನ್ನು ಕಡಿಮೆ ಮಾಡುತ್ತವೆ.
ಅವಕಾಡೊ, ನಟ್ಸ್, ಬೀಜಗಳು ಮತ್ತು ಆಲಿವ್ ಎಣ್ಣೆಯಂತಹ ಆರೋಗ್ಯಕರ ಕೊಬ್ಬಿನಾಂಶವಿರುವ ಆಹಾರಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿಕೊಳ್ಳಿ. ಮೀನಿನಲ್ಲಿರುವ ಒಮೆಗಾ-3 ಫ್ಯಾಟಿ ಆಸಿಡ್, ಲಿವರ್‌ನಲ್ಲಿರುವ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
55
ಕೊಬ್ಬು ಕಡಿಮೆ ಇರುವ ಪ್ರೋಟೀನ್
ಚಿಕನ್, ಮೀನು, ಬೇಳೆಕಾಳುಗಳಂತಹ ಕಡಿಮೆ ಕೊಬ್ಬಿನ ಪ್ರೋಟೀನ್ ಆಹಾರಗಳನ್ನು ಸೇವಿಸಿ. ಇವು ಸ್ನಾಯುಗಳ ಆರೋಗ್ಯವನ್ನು ಕಾಪಾಡುವುದರ ಜೊತೆಗೆ, ದೇಹದ ತೂಕ ಇಳಿಸಲು ಮತ್ತು ಲಿವರ್‌ನಲ್ಲಿನ ಕೊಬ್ಬನ್ನು ಕರಗಿಸಲು ನೆರವಾಗುತ್ತವೆ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.