ದೇವರ ದರ್ಶನ ಮುಗಿಸಿ ಬೆಂಗಳೂರಿಗೆ ಮರಳುತ್ತಿದ್ದ ಬಸ್ ಮಂಡ್ಯ ಬಳಿ ಪಲ್ಟಿ, 8 ಮಂದಿಗೆ ಗಾಯ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆ ದಾಖಲಿಸಲಾಗಿದೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಬಸ್‌ನಲ್ಲಿದ್ದ 8 ಮಂದಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಮದ್ದೂರು ಆಸ್ಪತ್ರೆ ದಾಖಲಿಸಲಾಗಿದೆ.
28
ಶಿಂಷಾ ಮಾರಮ್ಮ ದೇವಾಲಯಕ್ಕೆ ಭೇಟಿ
ಬೆಂಗಳೂರು ಮೂಲದ ನಿವಾಸಿಗಳು ಖಾಸಗಿ ಬಸ್ ಮಾಡಿಕೊಂಡು ದೇವಸ್ಥಾನ, ಮಂದಿರ ದರ್ಶನ ಮಾಡಿದ್ದರು. ಶಿಂಷಾ ಮಾರಮ್ಮ ದೇವಾಲಯಕ್ಕೆ ಭೇಟಿ ದೇವರ ದರ್ಶನ ಪಡೆದು ಮರಳುತ್ತಿರುವಾಗ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೆಂ-ಮೈ ಹೆದ್ದಾರಿ ಬಳಿಯ ಅಗರಲಿಂಗನದೊಡ್ಡಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
38
ಅ್ಯಕ್ಸೆಲ್ ತುಂಡಾಗಿ ನಿಯಂತ್ರಣ ಕಳೆದುಕೊಂಡ ಬಸ್
ಖಾಸಗಿ ಬಸ್ ಅಗರಲಿಂಗನದೊಡ್ಡಿ ಬಳಿ ಸಂಚರಿಸುತ್ತಿದ್ದಂತೆ ಆ್ಯಕ್ಸೆಲ್ ಕಟ್ ಆಗಿದೆ. ಇದರ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದೆ. ಷ್ಟೇ ಅಲ್ಲ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಬಸ್ ನಿಗದಿತ ವೇಗದಲ್ಲಿದ್ದ ಕಾರಣ ಭಾರಿ ದುರಂ ತಪ್ಪಿದೆ. ಬಸ್ ನಿಯಂತ್ರಣಕ್ಕೆ ಪಡೆಯಲು ಚಾಲಕ ಹರಹಾಸ ಮಾಡಿದ್ದಾನೆ. ಆದರೆ ಸಾಧ್ಯವಾಗಿಲ್ಲ. ಬಸ್ ಪಲ್ಟಿಯಾಗಿದೆ. 8 ಗಾಯಾಳುಗಳಿಗೆ ಮದ್ದೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ. ಅದೃಷ್ಠವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ನಿಧಾನವಾಗಿ ಚಲಿಸುತ್ತಿದ್ದ ಕಾರಣ ಭಾರಿ ದುರಂತವೊಂದು ತಪ್ಪಿದೆ.
58
ತಕ್ಷಣವೇ ನೆರವಿಗೆ ಧಾವಿಸಿದ ಸ್ಥಳೀಯರು
ಬಸ್ ಪಲ್ಟಿಯಾಗುತ್ತಿದ್ದಂತೆ ಇತರ ವಾಹನ ಸವಾರರು, ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಬಸ್ ಒಳಗಿನಿಂದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆ ದಾಖಲಿಸಿದ್ದಾರೆ. ಹಲವರು ಕೈ, ಕಾಲು,ತಲೆಗಳಿಗೆ ಗಾಯವಾಗಿದೆ.
68
ಹೆದ್ದಾರಿ ಜಾಮ್
ಹೆದ್ದಾರಿಯಲ್ಲೇ ಬಸ್ ಪಲ್ಟಿಯಾಗಿ ಬಿದ್ದ ಕಾರಣ ಬೆಂಗಳೂರು ಮೈಸೂರು ಹೈವೇನಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ ಹೆದ್ದಾರಿ ಸಂಪೂರ್ಣ ಜಾಮ್ ಆಗಿದೆ.
78
ಮದ್ದೂರು ಸಂಚಾರಿ ಠಾಣಾ ಪೊಲೀಸರು ಭೇಟಿ
ಬಸ್ ಪಲ್ಟಿಯಾಗಿರುವ ಮಾಹಿತಿ ತಿಳಿಯುತ್ತಿದ್ದಂತೆ ಮದ್ದೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದರೆ. ಮದ್ದೂರು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮದ್ದೂರು ಸಂಚಾರಿ ಠಾಣಾ ಪೊಲೀಸರು ಭೇಟಿ
88
ಭಾರಿ ಜನಸ್ತೋಮ
ಬಸ್ ಅಪಘಾತ ಮಾಹಿತಿ ಬೆನ್ನಲ್ಲೇ ಸ್ಥಳೀಯರು ಸೇರಿದಂತೆ ಹಲವರು ಜಮಾಯಿಸಿದ್ದಾರೆ. ಹೆದ್ದಾರಿಯಲ್ಲಿ ಜನಸ್ತೋಮ ನೆರೆದಿದೆ. ಇತ್ತ ವಾಹನ ಸವಾರರು ಟ್ರಾಫಿಕ್ ಜಾಮ್‌ನಿಂದ ಪರದಾಡುವಂತಾಯಿತು.