ನೋರಾ ಫತೇಹಿಗೆ ದೆಹಲಿ ನ್ಯಾಯಾಲಯ ಛೀಮಾರಿ; 'ದಾರಿ ತಪ್ಪಿಸ್ಬೇಡಿ' ಅಂದಿದ್ಯಾಕೆ? ಏನ್ ಮಾಡ್ತಿದ್ದಾರೆ ಈ ನಟಿ?

Published : Nov 02, 2026, 06:18 PM IST

Jailer 2 song Bollywood actress Nora Fatehi warned by a Delhi court not to mislead the court. ‘ಜೈಲರ್ 2’ ಚಿತ್ರದ ಹಾಡಿನಮೂಲಕ ಗಮನ ಸೆಳೆದಿದ್ದ ಬಾಲಿವುಡ್ ನಟಿ ನೋರಾ ಫತೇಹಿ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದು, ‘ನ್ಯಾಯಾಲಯದ ದಾರಿ ತಪ್ಪಿಸಬೇಡಿ’ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ.

PREV
16

Nora Fatehi has been warned by a Delhi court, why? ನಟಿ ನೋರಾ ಫತೇಹಿಗೆ ದೆಹಲಿ ನ್ಯಾಯಾಲಯದ ಛೀಮಾರಿ!

‘ಜೈಲರ್ 2’ ಚಿತ್ರದ ಹಾಡಿನಲ್ಲಿ ಭರ್ಜರಿ ಡ್ಯಾನ್ಸ್ ಮೂಲಕ ಗಮನ ಸೆಳೆದಿದ್ದ ಬಾಲಿವುಡ್ ನಟಿ ನೋರಾ ಫತೇಹಿ ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣವೊಂದರ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ದೆಹಲಿ ನ್ಯಾಯಾಲಯವು ನಟಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಲಯದ ದಾರಿ ತಪ್ಪಿಸುವ ಪ್ರಯತ್ನ ಮಾಡಬಾರದು ಎಂದು ಎಚ್ಚರಿಕೆ ನೀಡಿದೆ.

26

ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಸಿನಿಮಾ ಅಕ್ಟೋಬರ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ರಮ್ಯಾ ಕೃಷ್ಣನ್, ಮಿರ್ನಾ, ಎಸ್.ಜೆ. ಸೂರ್ಯ, ವಿದ್ಯಾ ಬಾಲನ್, ಸೂರಜ್ ವೆಂಜರಮೂಡು, ಹೃತಿಕ್ ರೋಷನ್, ಮೋಹನ್ ಲಾಲ್ ಹಾಗೂ ಶಿವರಾಜ್‌ಕುಮಾರ್ ಸೇರಿದಂತೆ ದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದು, ಸನ್ ಪಿಕ್ಚರ್ಸ್ ನಿರ್ಮಾಣ ಮಾಡಿದೆ.

36

ಚಿತ್ರ ಬಿಡುಗಡೆಯಾದ ಬಳಿಕ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು, 17 ದಿನಗಳಲ್ಲಿ ವಿಶ್ವಾದ್ಯಂತ ₹790 ಕೋಟಿ ಗಳಿಸಿದೆ ಎಂಬ ವರದಿಗಳಿವೆ. ತಮಿಳುನಾಡಿನಲ್ಲಿಯೂ ಚಿತ್ರದ ಗಳಿಕೆ ₹200 ಕೋಟಿ ಗಡಿ ದಾಟಿದೆ ಎನ್ನಲಾಗಿದೆ.

46

ಇಂತಹ ಸಂದರ್ಭದಲ್ಲಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನೋರಾ ಫತೇಹಿ ಹಳೆಯ ವಂಚನೆ ಪ್ರಕರಣದ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. 2020-21ರ ಅವಧಿಯಲ್ಲಿ ಜೈಲಿನಲ್ಲಿದ್ದ ರಾನ್‌ಬಾಕ್ಸಿ ಕಂಪನಿಯ ಮಾಜಿ ಮಾಲೀಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿಯನ್ನು ಉದ್ಯಮಿ ಸುಖೇಶ್ ಚಂದ್ರಶೇಖರ್ ಸುಮಾರು ₹200 ಕೋಟಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

56

ಈ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ED) ಈಗಾಗಲೇ ನೋರಾ ಫತೇಹಿ ಅವರನ್ನು ವಿಚಾರಣೆ ನಡೆಸಿದೆ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಪ್ರಕರಣದಲ್ಲಿ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

66

ಆದರೆ, ವಿಚಾರಣೆಗೆ ನಟಿ ಹಾಜರಾಗದಿರುವುದು ನ್ಯಾಯಾಲಯದ ಅಸಮಾಧಾನಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ನೋರಾ ಅವರ ವಕೀಲರಿಗೆ ಖಡಕ್ ಸೂಚನೆ ನೀಡಿದ್ದಾರೆ. ನ್ಯಾಯಾಲಯದ ದಾರಿ ತಪ್ಪಿಸುವ ಯಾವುದೇ ಪ್ರಯತ್ನ ಮಾಡದಂತೆ ನಟಿಗೆ ತಿಳಿಸಬೇಕು ಎಂದು ಹೇಳಿದ್ದಾರೆ. ಹೀಗಾಗಿ, ‘ಜೈಲರ್ 2’ ಯಶಸ್ಸಿನ ನಡುವೆಯೇ ನೋರಾ ಫತೇಹಿ ಅವರ ಕಾನೂನು ವಿಚಾರ ಮತ್ತೆ ಚರ್ಚೆಗೆ ಬಂದಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories