ಇದೊಂದು ಹೊಸ ಪ್ರಯೋಗ: ಪವರ್ ಸ್ಟಾರ್ ಹೆಗಲಿಗೆ ಜಿಲ್ಲಾ ಅಭಿವೃದ್ಧಿ ಹೊಣೆ

Published : Mar 07, 2020, 09:11 PM ISTUpdated : Mar 07, 2020, 09:34 PM IST

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಈ ಹಿಂದೆ ಸರ್ಕಾರದ ಹಲವು ಸಂಸ್ಥೆಗಳಿಗೆ, ಕರ್ನಾಟಕ ಸರ್ಕಾರದ ಹಲವು ಯೋಜನೆಗಳಿಗೆ ರಾಯಭಾರಿಯಾಗಿ ಕೆಲಸ ಮಾಡಿದ್ದಾರೆ. ಇದೀಗ ಚಾಮರಾಜನಗರ ಜಿಲ್ಲಾ ಅಭಿವೃದ್ಧಿ ರಾಯಭಾರಿಯಾಗಿದ್ದಾರೆ. ಇದೊಂದು ಹೊಸ ಪ್ರಯೋಗ.

PREV
18
ಇದೊಂದು ಹೊಸ ಪ್ರಯೋಗ: ಪವರ್ ಸ್ಟಾರ್ ಹೆಗಲಿಗೆ ಜಿಲ್ಲಾ ಅಭಿವೃದ್ಧಿ ಹೊಣೆ
ಚಾಮರಾಜನಗರ ಜಲ್ಲಾ ಉಸ್ತುವಾರಿ ಸಚಿವ, ಪ್ರೌಢ ಹಾಗೂ ಪ್ರಾಥಮಿಕ ಸಚಿವ ಸುರೇಶ್ ಕುಮಾರ್ ಅವರು ಜಿಲ್ಲೆಯ ಅಭಿವೃದ್ಧಿಗೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

28
ಚಾಮರಾಜನಗರ ಜಿಲ್ಲೆಯಲ್ಲಿ ನೈಸರ್ಗಿಕ ಸಂಪತ್ತು ಅಪಾರ ಪ್ರಮಾಣದಲ್ಲಿದೆ. ಜೊತೆಗೆ ಮಲೆ ಮಾದೇಶ್ವರ ಬೆಟ್ಟ, ಬಿಳಿಗಿರಂಗನ ಬೆಟ್ಟ, ಹಿಮವದ್ ಗೋಪಾಲಕೃಷ್ಣ ಬೆಟ್ಟ ಗಳಂತಹ ಭಕ್ತಾದಿಗಳನ್ನು, ಪ್ರವಾಸಿಗಳನ್ನು ಸೆಳೆಯುವ ಕ್ಷೇತ್ರಗಳ ಅಭಿವೃದ್ಧಿಗೆ ಸುರೇಶ್ ಕುಮಾರ್ ಅವರು ಪವರ್ ಸ್ಟಾರ್ ಪುನೀತ್ ಭೇಟಿ ಮಾಡಿದರು.

38
ಮೂಲತಃ ಚಾಮರಾಜನಗರ ಜಿಲ್ಲೆಯವರೇ ಆದ ಪುನೀತ್‍ರಾಜ್‍ಕುಮಾರ್ ಅವರನ್ನು ಶನಿವಾರ ಸಂಜೆ ಸದಾಶಿವನಗರದ ಅವರ ಮನೆಯಲ್ಲಿ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭೇಟಿ ಮಾಡಿದರು.

48
ಚಾಮರಾಜನರ ಜಿಲ್ಲಾಡಳಿತದ ಪರವಾಗಿ ಪುನೀತ್ ರಾಜ್‍ಕುಮಾರ್ ಅವರನ್ನು ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಕಾರ್ಯನಿರ್ವಹಿಸಲು ಅಧಿಕೃತವಾಗಿ ಆಹ್ವಾನ ನೀಡಿದರು.

58
ಜಿಲ್ಲಾಡಳಿತದ ಪ್ರಸ್ತಾವಕ್ಕೆ ತುಂಬಾ ಪ್ರೀತಿಯಿಂದಲೇ ಸಮ್ಮತಿ ಸೂಚಿಸಿರುವ ಪುನೀತ್ ರಾಜ್‍ಕುಮಾರ್ ಮಾತನಾಡಿ, ನನ್ನ ತಂದೆ ಡಾ. ರಾಜ್‍ಕುಮಾರ್ ಅವರು ಹುಟ್ಟಿ ಬೆಳೆದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಕೆಲಸ ಮಾಡುವುದು ನಿಜಕ್ಕೂ ನನ್ನ ಸೌಭಾಗ್ಯವೆಂದೇ ಭಾವಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

68
ರಾಜ್ಯದ ಎಲ್ಲ ಜಿಲ್ಲೆಗಳು ಅಭಿವೃದ್ಧಿಯಾಗಿ ರಾಜ್ಯ ಪೂರ್ಣ ಅಭಿವೃದ್ಧಿಯಾಗಬೇಕಿದ್ದು, ಚಾಮರಾಜನಗರ ಜಿಲ್ಲೆಯೊಂದಿಗೆ ನಮ್ಮದು ಭಾವನಾತ್ಮಕ ಸಂಬಂಧವಾಗಿದೆ. ನಮ್ಮ ತಂದೆ ಡಾ. ರಾಜ್‍ಕುಮಾರ್ ಸ್ಮರಣೆ ಅಂಗವಾಗಿ ಚಾಮರಾಜನಗರದಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸುವ ಉದ್ದೇಶವಿದೆ ಎಂದ ಅಪ್ಪು

78
ಒಟ್ಟಿನಲ್ಲಿ ಇನ್ಮುಂದೆ ತ್ರನಟ ಪುನೀತ್ ರಾಜ್‍ಕುಮಾರ್ ರಾಜ್ಯದ ಗಡಿಭಾಗದ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಚಿ ಕಾರ್ಯನಿರ್ವಹಿಸಲಿದ್ದಾರೆ.

88
ಇತ್ತೀಚೆಗಷ್ಟೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಬಿಎಂಟಿಸಿಯ ರಾಯಭಾರಿಯಾಗಿದ್ದನ್ನ ಇಲ್ಲಿ ಸ್ಮರಿಸಹುದು.

click me!

Recommended Stories