ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ: ಪಾರ್ಟ್ 1’ ಸಿನಿಮಾ ಹೊಸ ಸುನಾಮಿಯನ್ನೇ ಸೃಷ್ಟಿಸಿದೆ. ಬಿಡುಗಡೆಯಾಗಿ ಕೇವಲ 10 ದಿನಗಳಲ್ಲೇ ಬರೋಬ್ಬರಿ 673.95 ಕೋಟಿ ರೂಪಾಯಿ ಗಳಿಸಿರುವ ಈ ಚಿತ್ರ, ಬಾಲಿವುಡ್‌ನ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ಜೀವಮಾನದ ಕಲೆಕ್ಷನ್ ದಾಖಲೆಯನ್ನು ಹಿಂದಿಕ್ಕಿದೆ.
‘ರಾಮಾಯಣ’ ಬಾಕ್ಸ್ ಆಫೀಸ್ ಸುನಾಮಿ; ‘ಜವಾನ್’, ‘ಸ್ತ್ರೀ 2’ ಲೈಫ್‌ಟೈಮ್ ಕಲೆಕ್ಷನ್ ದಾಖಲೆ ಪುಡಿಪುಡಿ!
Ramayana Collection: ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ: ಪಾರ್ಟ್ 1’ ಸಿನಿಮಾ ಹೊಸ ಸುನಾಮಿಯನ್ನೇ ಸೃಷ್ಟಿಸಿದೆ. ಬಿಡುಗಡೆಯಾಗಿ ಕೇವಲ 10 ದಿನಗಳಲ್ಲೇ ಬರೋಬ್ಬರಿ 673.95 ಕೋಟಿ ರೂಪಾಯಿ ಗಳಿಸಿರುವ ಈ ಚಿತ್ರ, ಬಾಲಿವುಡ್‌ನ ಹಲವು ಬ್ಲಾಕ್‌ಬಸ್ಟರ್ ಸಿನಿಮಾಗಳ ಜೀವಮಾನದ ಕಲೆಕ್ಷನ್ ದಾಖಲೆಯನ್ನು ಹಿಂದಿಕ್ಕಿದೆ. ಶಾರುಖ್ ಖಾನ್ ನಟನೆಯ ‘ಜವಾನ್’, ರಾಜ್‌ಕುಮಾರ್ ರಾವ್ ಅಭಿನಯದ ‘ಸ್ತ್ರೀ 2’ ಚಿತ್ರಗಳ ದಾಖಲೆಗಳನ್ನು ಮುರಿದಿರುವ ರಾಮಾಯಣದ ನಾಗಾಲೋಟ ಈಗ ಚಿತ್ರರಂಗದ ಗಮನ ಸೆಳೆದಿದೆ.
25
ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಪೌರಾಣಿಕ ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ ಕಾಣಿಸಿಕೊಂಡಿದ್ದಾರೆ. ನವೆಂಬರ್ 5ರಂದು ವಿಶ್ವದಾದ್ಯಂತ ಬಿಡುಗಡೆಯಾದ ಸಿನಿಮಾ ಮೊದಲ ದಿನದಿಂದಲೇ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುತ್ತಿದೆ. ‘ಸ್ಯಾಕ್ನಿಲ್ಕ್’ ವರದಿಯ ಪ್ರಕಾರ, ನವೆಂಬರ್ 14ರ ಎರಡನೇ ಶನಿವಾರ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಂದೇ ದಿನದಲ್ಲಿ 61.25 ಕೋಟಿ ರೂಪಾಯಿ ಗಳಿಸಿದೆ. ಇದರೊಂದಿಗೆ ಭಾರತದ ಒಟ್ಟು ಗಳಿಕೆ 673.95 ಕೋಟಿ ರೂಪಾಯಿಗೆ ಏರಿಕೆಯಾಗಿದೆ.
35
ಈ ಮೂಲಕ ‘ಜವಾನ್’ ಚಿತ್ರದ 643.87 ಕೋಟಿ ರೂಪಾಯಿ ಹಾಗೂ ‘ಸ್ತ್ರೀ 2’ ಸಿನಿಮಾದ 625.27 ಕೋಟಿ ರೂಪಾಯಿ ಲೈಫ್‌ಟೈಮ್ ಕಲೆಕ್ಷನ್ ದಾಖಲೆಗಳನ್ನು ರಾಮಾಯಣ ಹಿಂದಿಕ್ಕಿದೆ. ಈಗಾಗಲೇ ಶಾರುಖ್ ಖಾನ್ ಅವರ ‘ಪಠಾಣ್’ ಮತ್ತು ರಣಬೀರ್ ಕಪೂರ್ ಅಭಿನಯದ ‘ಅನಿಮಲ್’ ಸಿನಿಮಾಗಳ ಗಳಿಕೆಯನ್ನೂ ಮೀರಿಸಿರುವುದು ವಿಶೇಷ.
ಇನ್ನು ಚಿತ್ರದ ಬಾಕ್ಸ್ ಆಫೀಸ್ ಅಬ್ಬರ ಬಿಡುಗಡೆಯ ಮುನ್ನವೇ ಆರಂಭವಾಗಿತ್ತು. ದಸರಾ ಹಬ್ಬದ ಸಂದರ್ಭದಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್ ಶುರುವಾಗಿದ್ದು, ಸಿನಿಮಾ ತೆರೆಗೆ ಬರುವ ಮೊದಲೇ ವಿಶ್ವದಾದ್ಯಂತ 200 ಕೋಟಿ ರೂಪಾಯಿ ಮೌಲ್ಯದ ಟಿಕೆಟ್‌ಗಳು ಮಾರಾಟವಾಗಿದ್ದವು. ಮೊದಲ ದಿನ ಭಾರತದಲ್ಲಿ 64.85 ಕೋಟಿ ರೂಪಾಯಿ ಗಳಿಸಿ ಬಾಲಿವುಡ್‌ನ ನಾಲ್ಕನೇ ಅತಿದೊಡ್ಡ ಓಪನಿಂಗ್ ಪಡೆದಿತ್ತು.
55
ವಾರದ ದಿನಗಳಲ್ಲಿ ಕಲೆಕ್ಷನ್ ಕೊಂಚ ಕುಸಿದರೂ ದೀಪಾವಳಿ ರಜೆಯ ಸಂದರ್ಭದಲ್ಲಿ ಮತ್ತೆ ಭರ್ಜರಿ ಏರಿಕೆ ಕಂಡಿತು. ಬಿಡುಗಡೆಯ ಏಳನೇ ದಿನವೇ 500 ಕೋಟಿ ರೂಪಾಯಿ ಕ್ಲಬ್ ಸೇರಿದ್ದ ಸಿನಿಮಾ ಇದೀಗ 673 ಕೋಟಿ ರೂಪಾಯಿ ಗಡಿ ದಾಟಿದೆ.
ವಾಲ್ಮೀಕಿ ರಾಮಾಯಣ ಆಧರಿಸಿದ ಈ ಚಿತ್ರವನ್ನು ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್, ಡಿಎನ್‌ಇಜಿ ಹಾಗೂ ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಜಂಟಿಯಾಗಿ ನಿರ್ಮಿಸಿವೆ. ಲಕ್ಷ್ಮಣನಾಗಿ ರವಿ ದುಬೆ ನಟಿಸಿದ್ದು, ಎರಡು ಭಾಗಗಳಲ್ಲಿ ಮೂಡಿಬರುತ್ತಿರುವ ಚಿತ್ರದ ಮೊದಲ ಭಾಗವೇ ಇಷ್ಟೊಂದು ದಾಖಲೆ ಬರೆಯುತ್ತಿರುವುದು ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.