ಅಮೃತಘಳಿಗೆ, ಲಂಗೋಟಿ ಮ್ಯಾನ್ ಅಲ್ಲದೆ ತೆಲುಗಿನ ಯು ಆರ್ ಮೈ ಹೀರೋ ಚಿತ್ರದಲ್ಲೂ ಸಂಹಿತಾ ವಿನ್ಯಾ ನಾಯಕಿಯಾಗಿ ನಟಿಸಿದ್ದಾರೆ. ಹಾಲು ತುಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂಹಿತಾ ವಿನ್ಯಾ, ಸೀತಮ್ಮ ಬಂದಳು ಸಿರಿಮಲ್ಲಿಗೆ ತೊಟ್ಟು, ಅಮೃತ ಘಳಿಗೆ, ವಿಷ್ಣು ಸರ್ಕಲ್, ನಸಾಬ್, ಮಿಕ್ಸಿಂಗ್ ಪ್ರೀತಿ, ಸ್ವಾಭಿಮಾನಿ ಅಲ್ಲದೆ ತೆಲುಗು, ತಮಿಳು ಸೇರಿದಂತೆ 18ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿದ್ದಾರೆ.