ದಕ್ಷಿಣ ಭಾರತದಲ್ಲಿ ಮತ್ತೆ ಕಮಲ ಅರಳಿದೆ. ಹಸಿರು ಶಾಲು ಹೊದ್ದು ಬಂದ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜುಲೈ 26, ಶುಕ್ರವಾರ ಸಂಜೆ 6.35ಕ್ಕೆ ರಾಜ್ಯಪಾಲ ವಿಆರ್ ವಾಲಾ ಯಡಿಯೂರಪ್ಪ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಹಾಗಾದರೆ ಜುಲೈ 26 ರಂದು ಬಿಎಸ್ ವೈ ದಿನಚರಿ ಹೇಗಿತ್ತು?ಪ್ರಮಾಣ ವಚನದ ಹೈಲೈಟ್ಸ್ ಏನು?