ಪೊಲೀಸ್ ಠಾಣೆಗೆ ದೂರು ನೀಡಿ ವಾಪಾಸ್ಸಾಗುತ್ತಿದ್ದ ಪುನೀತ್ ಕೆರೆಹಳ್ಳಿ ಅರೆಸ್ಟ್!

Published : Jan 24, 2026, 06:35 AM IST

ಬೆಂಗಳೂರು: ಹಿಂದುಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಸದ್ಯಕ್ಕೆ ಅವರನ್ನು ಜಾಮೀನಿನ ಮೇಲೆ ರಿಲೀಸ್ ಮಾಡಲಾಗಿದೆ. ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್ 

PREV
16
ಹಳೆ ಪ್ರಕರಣವೊಂದರಲ್ಲಿ ಪುನೀತ್ ಕೆರೆಹಳ್ಳಿ ಅರೆಸ್ಟ್

ಹಳೇ ಪ್ರಕರಣದ ಸಂಬಂಧ ಹಿಂದು ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದು, ಸದ್ಯ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

26
ಬಾಗಲಗುಂಟೆ ಠಾಣೆ ಪೊಲೀಸರಿಂದ ಪುನೀತ್ ಬಂಧನ

ಕೆಂಪಾಪುರದಲ್ಲಿ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಆರೋಪಿಸಿ ಗುರುವಾರ ಪುನೀತ್‌ ಸೋಲದೇವನಹಳ್ಳಿ ಪೊಲೀಸ್‌ ಠಾಣೆಗೆ ತೆರಳಿ ದೂರು ನೀಡಿದ್ದರು. ದೂರು ನೀಡಿ ತೆರಳುವ ವೇಳೆ ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

36
ಏನಿದು ಪ್ರಕರಣ

2025ರಲ್ಲಿ ಅಲ್ಲಾಬಕ್ಷ್‌ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದ ಸಂಬಂಧ ಹಲವು ಬಾರಿ ನೋಟಿಸ್‌ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಬಂಧಿಸಿದ್ದಾರೆ.

46
ಜಾಮೀನಿನ ಮೇಲೆ ಬಿಡುಗಡೆ

ಪೊಲೀಸರು ಶುಕ್ರವಾರ ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ವಿಚಾರಣೆ ನಡೆಸಿದ ಕೋರ್ಟ್‌ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

56
ಸದಾ ಒಂದಿದಲ್ಲೊಂದು ವಿಚಾರಕ್ಕೆ ಸುದ್ದಿಯಲ್ಲಿರುವ ಪುನೀತ್ ಕೆರೆಹಳ್ಳಿ

ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಲ್ಲಿರುವ ಪುನೀತ್ ಕೆರೆಹಳ್ಳಿ, ಗುರುವಾರ ಬಂಧನಕ್ಕೊಳಗಾಗಿ, ಶುಕ್ರವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

66
ಕಳೆದ ವಾರ ಬನ್ನೇರುಘಟ್ಟ ಪೊಲೀಸರು ಅರೆಸ್ಟ್ ಮಾಡಿದ್ರು

ಜನವರಿ 16 ರಂದು ಬಿಂಗಿಪುರದ ಕಾಲೋನಿಯ ಮೇಲೆ ದಾಳಿ ನಡೆಸಿ ಅಲ್ಲಿನ ನಿವಾಸಿಗಳನ್ನು ಅಕ್ರಮ ವಲಸಿಗರು ಎಂದು ಆರೋಪಿಸಿದಕ್ಕೆ ಬನ್ನೇರುಘಟ್ಟ ಪೊಲೀಸರು ಪುನೀತ್‌ ಅವರನ್ನು ಬಂಧಿಸಿದ್ದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories