Published : Sep 17, 2019, 04:49 PM ISTUpdated : Sep 17, 2019, 05:25 PM IST
ಕಲಬುರಗಿ: (ಸೆ.17) ಕಲಬುರಗಿಯಲ್ಲಿ ಕರ್ನಾಟಕ ಉತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಲ್ಯಾಣ ಪ್ರದೇಶವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಬಿ. ಎಸ್. ಯಡಿಯೂರಪ್ಪ ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬರುವ ಬಜೆಟ್ ನಲ್ಲಿ ಬಜೆಟ್‍ನಲ್ಲಿ ವಿಶೇಷ ಅನುದಾನ ಬಿಡುಗಡೆ ಮಾಡಲಾಗುವುದು, ನನ್ನ ಅವಧಿಯಲ್ಲಿ ಇದು ಹೈ.ಕ.ಪ್ರದೇಶವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಎಂದು ಮರುನಾಮಕರಣ ಮಾಡುತ್ತಿರುವುದು ನನಗೆ ಅತೀವ ಸಂತೋಷವಾಗಿದೆ ಎಂದು ಹೇಳಿದ್ದಾರೆ.