Published : Dec 06, 2019, 06:04 PM ISTUpdated : Dec 06, 2019, 06:27 PM IST
ದಿಶಾ ರೇಪ್ ಹಾಗೂ ಮರ್ಡರ್ ಕೇಸ್ ಇಡೀ ದೇಶವನ್ನೇ ತಲ್ಲಣಗೊಳಿಸಿತ್ತು. ಹೈದರಾಬಾದ್ ಪೊಲೀಸರು ಎನ್‌ಕೌಂಟರ್ ಮೂಲಕ ಆರೋಪಿಗಳನ್ನು ಹತ್ಯೆ ಮಾಡಿದ್ದಾರೆ. ಇದೀಗ ಭಾರತ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ಆಟಗಾರ್ತಿ ಜ್ವಾಲಾ ಗುಟ್ಟಾ ಹೈದರಾಬಾದ್’ನಲ್ಲಿ ನಾಲ್ವರು ಅತ್ಯಾಚಾರಿಗಳ ಎನ್‌ಕೌಂಟರ್ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೀತಿ ಎನ್‌ಕೌಂಟರ್ ಮಾಡುವುದರಿಂದ ಅತ್ಯಾಚಾರ ಪ್ರಕರಣಗಳು ನಿಲ್ಲುತ್ತವೆಯೇ..? ಅದಕ್ಕಿಂತ ಮುಖ್ಯವಾಗಿ ಎಲ್ಲಾ ರೇಪಿಸ್ಟ್’ಗಳನ್ನು ಸಾಮಾಜಿಕ ತಾರತಮ್ಯವಿಲ್ಲದೇ ಒಂದೇ ರೀತಿ ನಡೆಸಿಕೊಳ್ಳಲಾಗುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಹೊಸ ಚರ್ಚೆ ಹುಟ್ಟುಹಾಕಿದ್ದಾರೆ.