ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಹಾಗೂ ಇತರ ಕಾರಣಗಳಿಂದ 2015ರ ಡಿಸೆಂಬರ್ 31ರವರೆಗೆ ತೆರವಾಗಿರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮೋದನೆ ನೀಡಲಾಗಿದೆ. ಅದೇ ರೀತಿ ವಿವಿಧ ಕಾರಣಗಳಿಂದ 1-1-2016ರಿಂದ 31-12-2020ರವರೆಗೆ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಹಮತಿ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು. ನಿಯಮದ ಪ್ರಕಾರ ಅನುದಾನಿತ ಶಾಲಾ ಶಿಕ್ಷಕ, ಸಿಬ್ಬಂದಿಗಳು ಜ್ಯೋತಿ ಸಂಜೀವಿನಿ ಆರೋಗ್ಯ ವಿಮಾ ಸೌಲಭ್ಯದ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.