ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿದ್ದು, ದೆಹಲಿಯಲ್ಲಿ ಕರ್ನಾಟಕ ರಾಜಕೀಯ ಜೋರಾಗಿ ನಡೆಯುತ್ತಿದೆ.
ಕೆಲವು ಸಚಿವರು ದೆಹಲಿಗೆ ಮತ್ತೆ ಕೆಲವು ಸಚಿವರು ಹೈದರಾಬಾದ್‍ಗೆ ತೆರಳಿರುವುದು ಕುತೂಹಲ ಮೂಡಿಸಿದೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಕಚೇರಿ ಪೂಜೆ ನೆಪದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರ್. ಸಚಿವ ಆರ್.ಅಶೋಕ್ ಸೇರಿದಂತೆ ಹಲವು ದೆಹಲಿಗೆ ಹಾರಿದ್ದಾರೆ.
ಕೇಂದ್ರದ ನಾಯಕರನ್ನು ಭೇಟಿ ಮಾಡಿ ತಮ್ಮ ಬೆಂಬಲಿಗರಿಗೆ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ಹಲವು ಸಚಿವರು ದೆಹಲಿಗೆ ತೆರಳಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.
ಕಚೇರಿ ಉದ್ಘಾಟನೆ ಕೇವಲ ನೆಪವಷ್ಟೆ ಎನ್ನಲಾಗಿದೆ. ಇನ್ನೊಂದೆಡೆ, ವಲಸಿಗ ತಂಡದ ಅನಾಯಕರಂತೆ ಬಿಂಬಿಸಿಕೊಂಡಿರುವ ಸಚಿವ ರಮೇಶ್ ಜಾರಕಿಹೊಳಿ, ಸರ್ಕಾರ ರಚನೆಗೆ ಕಾರಣರಾದವರ ಪರ ನಿಂತಿದ್ದಾರೆ.
ಸಿಎಂ ದೆಹಲಿಯಿಂದ ವಾಪಸ್ ಬಂದ ನಂತರ ಹಲವು ರಾಜ್ಯ ನಾಯಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಿದ್ದರು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ತಮ್ಮ ಜೊತೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಸಂಬಂಧ ದೆಹಲಿಯಿಂದ ಹಿಂದಿರುಗಿದ ಒಂದು ವಾರವಾಗುತ್ತ ಬಂದರೂ ಹೈಕಮಾಂಡ್ ಏನೂ ಹೇಳುತ್ತಿಲ್ಲ. ಹೀಗಾಗಿ ಬಿಜೆಪಿ ಗೊಂದಲದ ಗೂಡಾಗಿದೆ.