ಬೆಂಗಳೂರು (ಮೇ.05): ಪ್ರಜ್ವಲ್ ರೇವಣ್ಣ ವಿರುದ್ಧ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಿದ್ದು, ‘ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ಖಡಕ್ ಸೂಚನೆ ನೀಡಿದ್ದಾರೆ.