ಡಿಕೆ ಶಿವಕುಮಾರ್ ಬಳಿಕ ಕೆಪಿಸಿಸಿ ಅಧ್ಯಕ್ಷರು ಯಾರು ಎಂಬ ಪ್ರಶ್ನೆಗೆ ಸತೀಶ್ ಜಾರಕಿಹೊಳಿ ಎಂಬ ಉತ್ತರ ರಾಜಕೀಯ ವಲಯದಲ್ಲಿ ಚರ್ಚೆಯಲ್ಲಿತ್ತು. ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನದ ಜೊತೆ ಕೆಪಿಸಿಸಿ ಸ್ಥಾನವನ್ನು ಸಹ ಜಾರಕಿಹೊಳಿ ಕೇಳಿದ್ರು ಎನ್ನಲಾಗಿತ್ತು.
ಕಾಂಗ್ರೆಸ್ ಹೈಕಮಾಂಡ್‌ನಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ನೀಡಿದರೂ ಸಚಿವ ಸ್ಥಾನ ಕೈ ತಪ್ಪಿದರೆ ಬೆಳಗಾವಿ ರಾಜಕೀಯದ ಮೇಲಿನ ಹತೋಟಿ ತಪ್ಪುತ್ತದೆ ಎಂಬ ಕಾರಣಕ್ಕೆ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಹುದ್ದೆ ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ.
24
ಹೈಕಮಾಂಡ್‌ನಿಂದ ಇತ್ತು ಆಫರ್
ಮೊದಲಿನಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜತೆಗೆ ಸಚಿವ ಸ್ಥಾನಕ್ಕೂ ಪಟ್ಟು ಹಿಡಿದಿದ್ದರು. ತನ್ಮೂಲಕ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವನ ಹುದ್ದೆ ಬಿಟ್ಟುಕೊಡಲು ನಿರಾಕರಿಸಿದರು.
34
ಬೆಳಗಾವಿ ರಾಜಕಾರಣದ ಮೇಲಿನ ಹಿಡಿತ
ಮಂಗಳವಾರ ನಡೆದ ಮಾತುಕತೆಯ ವೇಳೆಯೂ ಕೆಪಿಸಿಸಿ ಕಚೇರಿ ನಿರ್ವಹಿಸಲು ಪ್ರತಿ ತಿಂಗಳು 2-3 ಕೋಟಿ ರು. ಖರ್ಚಾಗುತ್ತದೆ. ಖರ್ಚು ನಿಭಾಯಿಸುವುದು ನನಗೆ ಸಮಸ್ಯೆಯಲ್ಲ. ಆದರೆ, ಬೆಳಗಾವಿ ರಾಜಕಾರಣದ ಮೇಲಿನ ಹಿಡಿತ ತಪ್ಪಬಾರದು ಎಂಬ ಕಾರಣಕ್ಕೆ ನನಗೆ ಸಚಿವ ಸ್ಥಾನ ಬೇಕು ಎಂದು ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದರು ಎಂದು ಹೇಳಲಾಗುತ್ತಿದೆ.
ಸಚಿವ ಸ್ಥಾನದ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷ ಪಟ್ಟ ತಪ್ಪಿಸಿಕೊಂಡರು ಎಂದು ಮೂಲಗಳು ತಿಳಿಸಿವೆ. ಹೀಗಾಗಿ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪಟ್ಟಕ್ಕಿಂತ ಬೆಳಗಾವಿ ರಾಜಕೀಯದ ಮೇಲಿನ ಹಿಡಿತವನ್ನೇ ಆದ್ಯತೆಯಾಗಿ ಸ್ವೀಕರಿಸಿದರು ಎಂಬ ಮಾತು ಕೇಳಿ ಬಂದಿದೆ. ಇದೀಗ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಯಾವ ಖಾತೆ ಮೇಲೆ ಕಣ್ಣಿಟ್ಟಿದ್ದಾರೆ ಎಂಬುದರ ಬಗ್ಗೆ ಕುತೂಹಲ ಮೂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.