ಗಲಭೆಕೋರರ ಹೆಡೆಮುರಿಕಟ್ಟಲು ಮುಂದಾದ ಸರ್ಕಾರ, ಬಿಎಸ್ ವೈ ಸಭೆಯ ಪ್ರಮುಖಾಂಶಗಳು!

First Published Aug 17, 2020, 3:00 PM IST

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿದೆ.  ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು (ಸೋಮವಾರ) ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ತೀರ್ಮಾನಗಳು ಈ ಕೆಳಗಿನಂತಿವೆ.

ಬೆಂಗಳೂರಿನ ಡಿ.ಜೆ.ಹಳ್ಳಿ, ಕಾವಲಭೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು (ಸೋಮವಾರ) ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ತೆಗೆದುಕೊಳ್ಳಲಾದ ಪ್ರಮುಖ ತೀರ್ಮಾನಗಳು ಈ ಮುಂದಿನಂತಿವೆ.
undefined
1. ಸಾರ್ವಜನಿಕ ಹಾಗು ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಉಚ್ಛನ್ಯಾಯಾಲಯಕ್ಕೆ..
undefined
2. ಅಲ್ಲದೇ ಈ ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA Act) ಯನ್ನು ಸಹ ಅಳವಡಿಸಿರುವುದರ ಬಗ್ಗೆ ತಿಳಿಸಲಾಯಿತು.
undefined
3. ಈ ತನಿಖೆಗಳನ್ನು ತ್ವರಿತವಾಗಿ ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ.
undefined
4. ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು.
undefined
5. ಈ ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯ ಕಂಡುಬಂದಲ್ಲಿ ಗೂಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ.
undefined
click me!