ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ವ್ಯವಸ್ಥಿತ ಅಪಪ್ರಚಾರ ಮಾಡುತ್ತಾ ಬಂದಿರುವ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.
ಎಪ್‌ಸ್ಟೀನ್ ಫೈಲ್ಸ್ ಆಧರಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಅಪಹಾಸ್ಯ ಮಾಡಿದ ಕಾಂಗ್ರೆಸ್ ಕಾರ್ಯಕರ್ತೆ ಬಿಂದು ಗೌಡ ವಿರುದ್ದ ಬಿಜೆಪಿ ನಿಯೋಗ ದೂರು ದಾಖಲಿಸಿದೆ.
25
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಬಿಂದು ಗೌಡ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಿಯೋಗ ದೂರು ದಾಖಲಿಸಿದೆ.
35
ಬಿಂದು ಗೌಡ ವಿರುದ್ದ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ವಿರುದ್ದ ಬಿಂದು ಗೌಡ ಎನ್ನುವವರು ವ್ಯವಸ್ಥಿತವಾದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕ ಪ್ರಶಾಂತ್ ಮಾಕನೂರು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಫೇಸ್‌ಬುಕ್‌ನಲ್ಲಿ ಬಿಂದು ಸಿರ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಅತ್ಯಂತ ಅಶ್ಲೀಲ ಹಾಗೂ ವಿಕೃತವಾಗಿ ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
55
ಕಠಿಣ ಕ್ರಮ ಕೈಗೊಳ್ಳಲು ಮನವಿ
ಎಪ್‌ಸ್ಟೀನ್ ಫೈಲ್ಸ್ ಎಂಬ ತಪ್ಪು ಮಾಹಿತಿ ಬಳಸಿ ಸಾರ್ವಜನಿಕರಲ್ಲಿ ಗೊಂದಲ ಮತ್ತು ದ್ವೇಷ ಬಿತ್ತಲು ಪ್ರಯತ್ನಿಸಲಾಗುತ್ತಿದೆ. ಈ ಪೋಸ್ಟ್ ಹಂಚಿಕೊಂಡವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.