ಗೋಹತ್ಯೆ ನಿಷೇಧ ಮಸೂದೆ ಅಂಗೀಕಾರವಾಗುತ್ತಿದ್ದಂತೆಯೇ ಸದನದಲ್ಲಿ ಮೊಳಗಿದ ಜೈ ಶ್ರೀರಾಮ್ ಘೋಷಣೆ!

First Published | Dec 9, 2020, 10:34 PM IST

ಭಾರೀ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಇಂದು (ಬುಧವಾರ) ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರವಾಗಿದೆ.  ಗೋಹತ್ಯೆ ನಿಷೇಧ ಮಸೂದೆಗೆ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, ಈ ಮಸೂದೆ ಯಾವುದೇ ಚರ್ಚೆಯಿಲ್ಲದೇ ಅಂಗೀಕಾರಗೊಂಡಿದೆ. ಇನ್ನು ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೇ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಘೋಷಣೆಗಳನ್ನು ಮೊಳಗಿಸಿದ್ದು ವಿಶೇಷವಾಗಿತ್ತು.

ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೇ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಜೈ ಶ್ರೀರಾಮ್ ಘೋಷಣೆಗಳನ್ನು ಮೊಳಗಿಸಿದರು.
ಮಸೂದೆಗೆ ಅಂಗೀಕಾರ ದೊರೆತಿರುವುದನ್ನು ಸ್ವಾಗತಿಸಿದ ಬಿಜೆಪಿ ಸದಸ್ಯರು, ಜೈ ಶ್ರೀರಾಮ್ ಹಾಗೂ ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಕೂಗಿ ಸಂತಸ ವ್ಯಕ್ತಪಡಿಸಿದರು.
Tap to resize

ಗೋಹತ್ಯೆ ನಿಷೇಧ ಮಸೂದೆಗೆ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ, ಈ ಮಸೂದೆ ಯಾವುದೇ ಚರ್ಚೆಯಿಲ್ಲದೇ ಅಂಗೀಕಾರಗೊಂಡಿದೆ.
ಇದೇ ಖುಷಿಯಲ್ಲಿಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಹಸುವಿಗೆ ಪೂಜೆ ಮಾಡಿ ಸಂಭ್ರಮಿಸಿದರು.
ಇದಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಹ ಸಾಥ್ ನೀಡಿದರು.
ಗೋಹತ್ಯೆ ನಿಷೇಧ ಮಸೂದೆಗೆ ಅಂಗೀಕಾರ ದೊರೆಯುತ್ತಿದ್ದಂತೇ ಸದನದಿಂದ ಹೊರಬಂದು ಹಸುವಿಗೆ ಲಾಡು ತಿನ್ನಿಸಿದರು.

Latest Videos

click me!